October 22, 2026

ಕಡಬ: ನಿಲ್ಲಿಸಿದ್ದ ಗ್ಯಾಸ್ ಟ್ಯಾಂಕರ್‌ಗೆ ಕಾರು ಢಿಕ್ಕಿ: ಪಿಯು ವಿದ್ಯಾರ್ಥಿ ಸ್ಥಳದಲ್ಲೇ ಸಾವು

0
image_editor_output_image-2010194151-1792644625712

ಕಡಬ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ, ರಸ್ತೆಬದಿಯಲ್ಲಿ ನಿಲ್ಲಿಸಿದ್ದ ಗ್ಯಾಸ್ ಟ್ಯಾಂಕರ್‌ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಪ್ರಥಮ ವರ್ಷದ ಪಿಯು ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಈ ಘಟನೆ ಗುರುವಾರ ಮುಂಜಾನೆ ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿಯ ಕರ್ಬಸಂಕ ಬಳಿ ನಡೆದಿದೆ ಎಂದು ವರದಿಯಾಗಿದೆ.

ಮೃತರನ್ನು ನೆಲ್ಯಾಡಿಯಲ್ಲಿ ‘ಪ್ಲವರ್ಸ್ ಹೋಟೆಲ್’ ನಡೆಸುತ್ತಿರುವ ಜೋಜೋ ಟಿ. ಜೋರ್ಜ್ ಅವರ ಪುತ್ರ, 16 ವರ್ಷದ ಅಶ್ವಿನ್ ಜೋಜೋ ಜೋರ್ಜ್ ಎಂದು ಗುರುತಿಸಲಾಗಿದೆ.

ಇವರು ಪುತ್ತೂರಿನ ಕಾಲೇಜೊಂದರಲ್ಲಿ ಪ್ರಥಮ ಪಿಯುಸಿ ಅಭ್ಯಾಸ ಮಾಡುತ್ತಿದ್ದರು. ಗುರುವಾರ ಮುಂಜಾನೆ ನೆಲ್ಯಾಡಿ ಕರ್ಬಸಂಕದ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಲ್ಲಿಸಲಾಗಿದ್ದ ಗ್ಯಾಸ್‌ ಟ್ಯಾಂಕರ್‌ಗೆ ಕಾರು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ತೀವ್ರತೆಗೆ ಕಾರಿನಲ್ಲಿದ್ದ ಅಶ್ವಿನ್ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

error: Content is protected !!