ಬಂಟ್ವಾಳ: ಪಂಜಿಕಲ್ಲು ಗ್ರಾಮದ ಎರಡು ಸ್ಥಳಗಳಲ್ಲಿ ಸಿಡಿಲು ಬಡಿದು ಮನೆಗಳಿಗೆ ಹಾನಿ
ಬಂಟ್ವಾಳ: ತಾಲೂಕಿನ ಪಂಜಿಕಲ್ಲು ಗ್ರಾಮದ ಎರಡು ಪ್ರತ್ಯೇಕ ಸ್ಥಳಗಳಲ್ಲಿ ಮನೆಗಳಿಗೆ ಸಿಡಿಲು ಬಡಿದು ಹಾನಿಯಾಗಿರುವ ಘಟನೆ ಬುಧವಾರ ನಡೆದಿದೆ.
ಪಂಜಿಕಲ್ಲು ಗ್ರಾಮದ ಪಂಜಿಕಲ್ಲು ಪದವು ಎಂಬಲ್ಲಿ ಗೋಪಾಲ ಪೂಜಾರಿ ಅವರ ಮನೆಗೆ ಸಿಡಿಲು ಬಡಿದು ತೀವ್ರ ಹಾನಿಯಾಗಿದೆ. ಘಟನೆಯಿಂದ ಮನೆಯ ವಿವಿಧ ಭಾಗಗಳಿಗೆ ಹಾನಿಯಾಗಿರುವುದಾಗಿ ತಿಳಿದುಬಂದಿದೆ. ಇದೇ ಗ್ರಾಮದ ಪಾಟ್ರಡಿ ಮನೆ ಎಂಬಲ್ಲಿ ಅಚ್ಚುತ ಆಚಾರಿ ಅವರ ಮನೆಗೂ ಸಿಡಿಲು ಬಡಿದು ಭಾಗಶಃ ಹಾನಿಯಾಗಿದೆ. ಎರಡೂ ಘಟನೆಗಳಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
ಮಳೆಗಾಲದ ಸಂದರ್ಭದಲ್ಲಿ ಸಿಡಿಲಿನ ಆರ್ಭಟದಿಂದ ಮನೆಗಳಿಗೆ ಹಾನಿಯಾಗಿರುವುದರಿಂದ ಸ್ಥಳೀಯರಲ್ಲಿ ಆತಂಕ ಮೂಡಿದೆ.




