ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಜೊತೆಗೆ ಔಷಧ ದರಪಟ್ಟಿ ಪ್ರದರ್ಶನವೂ ಕಡ್ಡಾಯ
ಬೆಂಗಳೂರು: ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸಾ ವೆಚ್ಚ ಮಾತ್ರವಲ್ಲದೆ ಇನ್ಮುಂದೆ ವೈದ್ಯರ ಪ್ರಿಸ್ಕ್ರಿಪ್ಷನ್ ಇಲ್ಲದೆ ನೀಡಲಾಗದ ‘ಶೆಡ್ಯೂಲ್ಡ್ ಔಷಧ’ಗಳ ದರಪಟ್ಟಿಯನ್ನೂ ಸಾರ್ವಜನಿಕರಿಗೆ ಕಾಣುವಂತೆ ಪ್ರದರ್ಶಿಸುವುದನ್ನು ಸರ್ಕಾರ ಕಡ್ಡಾಯಗೊಳಿಸಿದೆ.
ಬೆಂಗಳೂರಿನ ಆರೋಗ್ಯ ಸೌಧದಲ್ಲಿ ಖಾಸಗಿ ಆಸ್ಪತ್ರೆಗಳು ಮತ್ತು ನರ್ಸಿಂಗ್ ಹೋಮ್ಗಳ ಸಂಘಟನೆ ಪದಾಧಿಕಾರಿಗಳೊಂದಿಗೆ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಮಹತ್ವದ ಸಭೆ ನಡೆಸಿದ ಆರೋಗ್ಯ ಸಚಿವ ಯು.ಟಿ. ಖಾದರ್ ಆಸ್ಪತ್ರೆಗಳ ಸುಲಿಗೆ ಪ್ರವೃತ್ತಿ ಮತ್ತು ಅತಿಯಾದ ದರ ವಸೂಲಿ ವಿರುದ್ಧ ತೀವ್ರ ಅಸಮಾಧಾನ ಹೊರಹಾಕಿದರು.
ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯ ಕ್ರಮದ ಬೆನ್ನಲ್ಲೇ, ಇದೀಗ ರೋಗಿಗಳಿಗೆ ಹೊರೆಯಾಗುತ್ತಿರುವ ಇತರ ಅಗತ್ಯ ಔಷಧಗಳ ದರ ನಿಯಂತ್ರಣಕ್ಕೂ ಆರೋಗ್ಯ ಇಲಾಖೆ ಮಹತ್ವದ ಹೆಜ್ಜೆ ಇಟ್ಟಿದೆ.




