ನಿರ್ಮಾಣ ಹಂತದ ಸೇತುವೆ ಕುಸಿತ: 27 ಮಂದಿಗೆ ಗಾಯ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯಲ್ಲಿ ಭಾನುವಾರ ನಡೆದ ನಿರ್ಮಾಣ ಹಂತದಲ್ಲಿರುವ ಸೇತುವೆಯ ಮೇಲಿನ ಕಬ್ಬಿಣದ ಶೆಟರ್ ಕುಸಿದು ಕನಿಷ್ಠ 27 ಕಾರ್ಮಿಕರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಾಮಗಡ-ಕೌಲ್‌ಪುರದಲ್ಲಿ ದೇವಿಕಾ ನದಿಯ ಮೇಲೆ ಗಡಿ ರಸ್ತೆಗಳ ಸಂಸ್ಥೆ (ಬಿಆರ್‌ಒ) ಪ್ರಮುಖ ಸೇತುವೆಯನ್ನು ನಿರ್ಮಿಸುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಅವಘಡ ಸಂಭವಿಸಿದಾಗ ಅಲ್ಲೇ ಇದ್ದ ಕಾರ್ಮಿಕರು ರಕ್ಷಣಾ ಕಾರ್ಯಾಚರಣೆಯ ನೇತೃತ್ವ ವಹಿಸಿದರು. ಬಳಿಕ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಯಿತು.
ಗಾಯಗೊಂಡವರ ಪೈಕಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಜಮ್ಮುವಿನ ಸರ್ಕಾರಿ ವೈದ್ಯಕೀಯ ಕಾಲೇಜಿಗೆ (ಜಿಎಂಸಿ) ಸ್ಥಳಾಂತರ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಘಟನೆ ಹಿಂದಿನ ಕಾರಣ ತಿಳಿದು ಬಂದಿಲ್ಲ.




