October 23, 2026

ಇಂದಿನಿಂದ ಅ. 24ರವರೆಗೆ ಮಳೆಯಾಗುವ ಸಾಧ್ಯತೆ

0
image_editor_output_image122781246-1792700212885

ಬೆಂಗಳೂರು: ಬೆಂಗಳೂರು ಸೇರಿದಂತೆ ಕರ್ನಾಟಕದ ದಕ್ಷಿಣ ಒಳನಾಡಿನ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಇಂದಿನಿಂದ ಅಕ್ಟೋಬರ್ 24ರವರೆಗೆ ಹಗುರದಿಂದ ಸಾಧಾರಣವಾಗಿ ಮಳೆಯಾಗುವ ಸಾಧ್ಯತೆಗಳು ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕದ ದಕ್ಷಿಣ ಒಳನಾಡಿನ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಮುಖ್ಯವಾಗಿ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆಯಲ್ಲಿ ಉತ್ತಮ ಮಳೆ ನಿರೀಕ್ಷಿಸಲಾಗಿದೆ. ಬೆಂಗಳೂರು ಮತ್ತು ಕರ್ನಾಟಕದ ದಕ್ಷಿಣ ಕರಾವಳಿ ಜಿಲ್ಲೆಗಳಲ್ಲಿ ಅಂದರೆ ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಮುಂದಿನ ಮೂರು ದಿನಗಳವರೆಗೆ ಮಳೆಯಾಗುವ ಸಾಧ್ಯತೆ ಇದೆ. ಹೀಗಿದ್ದರೂ ಅಕ್ಟೋಬರ್ 25ರಿಂದ ಕರ್ನಾಟಕದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಕೂಡ ಮಳೆಯ ಪ್ರಮಾಣ ಗಣನೀಯವಾಗಿ ತಗ್ಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

ಈ ಬಾರಿ ಡಿಸೆಂಬರ್, ಜನವರಿ ಹಾಗೂ ಫೆಬ್ರವರಿ ತಿಂಗಳಲ್ಲಿ ಹೆಚ್ಚಿಗೆ ಚಳಿ ಇರಲಿದೆ. ಅದರಲ್ಲಿಯೂ ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಹೋಲಿಸಿದರೆ ಉತ್ತರ ಒಳನಾಡಲ್ಲಿ ಚಳಿ ಜಾಸ್ತಿಯಿರಲಿದೆ. ಕರಾವಳಿ ಜಿಲ್ಲೆಗಳಲ್ಲಿ ಅಷ್ಟೊಂದು ಚಳಿ ಇರೋದಿಲ್ಲ. ಎಲ್‌ನಿನೋ ಹಿನ್ನಲೆ ಚಳಿಗಾಲದ ತೀವ್ರತೆ ಕಡಿಮೆ ಇರಲಿದ್ದು, ಉಷ್ಣತೆ ವಾಡಿಕೆಗಿಂತ ಸ್ವಲ್ಪ ಹೆಚ್ಚೇ ಇರಲಿದೆ ಎಂದು ಇಲಾಖೆ ಹೇಳಿದೆ.

Leave a Reply

Your email address will not be published. Required fields are marked *

error: Content is protected !!