ಎದೆ ನೋವು ತಾಳಲಾರದೆ ಅರಣ್ಯ ಇಲಾಖೆ ಸಿಬ್ಬಂದಿ ನೇಣಿಗೆ ಶರಣು
ಧಾರವಾಡ: ಅರಣ್ಯ ಇಲಾಖೆ ಸಿಬ್ಬಂದಿಯೊಬ್ಬರು ಎದೆನೋವು ತಾಳಲಾರದೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಧಾರವಾಡದ ಕುಮಾರೇಶ್ವರ ನಗರದಲ್ಲಿ ನಡೆದಿದೆ.
ವಿಠಲ್ ಜೋನಿ ಆತ್ಮಹತ್ಯೆಗೆ ಶರಣಾದ ದುರ್ದೈವಿ. ಕಳೆದ ರಾತ್ರಿ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಹಿಂದೆ ವಿಠಲ್ ಇಲಾಖೆಯ ನೌಕರ ಸಂಘದ ಅಧ್ಯಕ್ಷರಾಗಿದ್ದರು. ಎದೆನೋವು ತಾಳಲಾರದೆ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ವಿಠಲ್ ಪತ್ನಿ ಬೆಂಗಳೂರನಿಂದ ಧಾರವಾಡಕ್ಕೆ ಬಂದು ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ. ದೂರಿನಲ್ಲಿ ಅವರಿಗೆ ಎದೆ ನೋವಿನ ಸಮಸ್ಯೆ ಇತ್ತು. ಇದರಿಂದ ಕುಡಿತದ ಚಟಕ್ಕೆ ಬಿದ್ದಿದ್ದರು. ವೈಯಕ್ತಿಕ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾರೆ ಎಂದು ಉಲ್ಲೇಖಿಸಲಾಗಿದೆ.
ಶವವನ್ನು ಧಾರವಾಡ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ಧಾರವಾಡ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.




