ಮರ್ಸಿಡಿಸ್ ಕಾರು ಸ್ಕೂಟರ್‌ಗೆ ಢಿಕ್ಕಿ: ವ್ಯಕ್ತಿ ಸಾವು
ತಿರುವನಂತಪುರಂ: ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರ 17 ವರ್ಷದ ಮಗ ಚಲಾಯಿಸುತ್ತಿದ್ದ ಮರ್ಸಿಡಿಸ್ ಬೆನ್ಜ್ ಕಾರು ಸ್ಕೂಟರ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ 54 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಕೇರಳದ ಕೊಚ್ಚಿಯಲ್ಲಿ ಇಂದು ನಡೆದಿದೆ.
ಕೊಚ್ಚಿಯ ಚೆರಾನೆಲ್ಲೂರು ಸಮೀಪ ನಸುಕಿನ ಜಾವ 2 ರಿಂದ 3 ಗಂಟೆಯ ನಡುವೆ ಈ ಅಪಘಾತ ಸಂಭವಿಸಿದ್ದು, ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನ ಮಂಜಳಿ ನಿವಾಸಿ ಜಯಬಾಲಕೃಷ್ಣನ್ (54) ಎಂದು ಗುರುತಿಸಲಾಗಿದೆ.
ಪೊಲೀಸರ ಪ್ರಾಥಮಿಕ ಮಾಹಿತಿ ಪ್ರಕಾರ, ಕಾರು ಸ್ಕೂಟರ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದು, ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತಕ್ಕೆ ಕಾರಣವಾದ ಕಾರು ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರ ಹೆಸರಿನಲ್ಲಿ ನೋಂದಣಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.




