ಉಡುಪಿ: ವೃದ್ಧೆಯ ಚಿನ್ನದ ಸರ ಕಳವು: ಆರೋಪಿಯ ಬಂಧನ
ಉಡುಪಿ: ವೃದ್ಧೆಯೊಬ್ಬರ ಮನೆಯಿಂದ ಚಿನ್ನದ ಸರ ಕಳವು ಮಾಡಿದ್ದ 45 ವರ್ಷದ ಹೋಮ್ ನರ್ಸ್‌ನನ್ನು ಹಿರಿಯಡ್ಕ ಪೊಲೀಸರು ಬಂಧಿಸಿದೆ.
ಆತನಿಂದ 1.85 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ಕೃತ್ಯಕ್ಕೆ ಬಳಸಿದ್ದ ಬೈಕನ್ನು ವಶಪಡಿಸಿಕೊಂಡಿದ್ದಾರೆ.
ಬಂಧಿತ ಆರೋಪಿಯನ್ನು ಉಡುಪಿಯ ಪುತ್ತೂರು ಗ್ರಾಮದ ಸುಬ್ರಹ್ಮಣ್ಯ ನಗರ ನಿವಾಸಿ, ಹೋಮ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದ ಉಮೇಶ್ ಶೆಟ್ಟಿ (45) ಎಂದು ಗುರುತಿಸಲಾಗಿದೆ.




