October 28, 2026

ಉಡುಪಿ: ಕಬ್ಬಿಣದ ರಾಡ್‌ನಿಂದ ತಲೆಗೆ ಹೊಡೆದು ರೌಡಿಶೀಟರ್‌ನ ಬರ್ಬರವಾಗಿ ಹತ್ಯೆ

0
image_editor_output_image-820192604-1793156434348

ಉಡುಪಿ: ಜಿಲ್ಲೆಯ ಬ್ರಹ್ಮಾವರದಲ್ಲಿ ರೌಡಿಶೀಟರ್‌ನನ್ನು ಕಬ್ಬಿಣದ ರಾಡ್‌ನಿಂದ ತಲೆಗೆ ಹೊಡೆದು ಬರ್ಬರವಾಗಿ ಹತ್ಯೆಗೈದ ಘಟನೆ ನಡೆದಿದೆ.

ಹಣಕಾಸಿನ ವಿಚಾರಕ್ಕೆ ಇಬ್ಬರ ನಡುವೆ ಆರಂಭವಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡಿದೆ. ರೌಡಿಶೀಟರ್ ಸುಜಿತ್ ಪಿಂಟೊ (43) ಕೊಲೆಯಾದ ವ್ಯಕ್ತಿಯಾಗಿದ್ದು, ಕೊಲೆ ಪ್ರಕರಣದ ಆರೋಪಿ ಎನ್ನಲಾದ ರಿಕ್ಷಾ ಚಾಲಕ ಪ್ರಮೋದ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸುಜಿತ್ ಪಿಂಟೊ ಮತ್ತು ರಿಕ್ಷಾ ಚಾಲಕ ಪ್ರಮೋದ್ ನಡುವೆ ಹಣಕಾಸಿನ ವಿಚಾರವಾಗಿ ಗಲಾಟೆ ನಡೆದಿತ್ತು. ಸುಜಿತ್ ಪಿಂಟೊ, ಪ್ರಮೋದ್‌ಗೆ ಹಣ ಪಾವತಿಸುವುದು ಬಾಕಿ ಇದ್ದುದೇ ಗಲಾಟೆಗೆ ಕಾರಣ ಎಂದು ಹೇಳಲಾಗುತ್ತಿದೆ.

ಇಬ್ಬರೂ ಮದ್ಯದ ಅಮಲಿನಲ್ಲಿದ್ದ ವೇಳೆ ಮಾತಿಗೆ ಮಾತು ಬೆಳೆದು ಹೊಡೆದಾಟ ನಡೆದಿದೆ. ಈ ವೇಳೆ ಸಿಟ್ಟಿಗೆದ್ದ ಪ್ರಮೋದ್, ಕಬ್ಬಿಣದ ರಾಡ್‌ನಿಂದ ಸುಜಿತ್ ಪಿಂಟೊ ತಲೆಗೆ ಹೊಡೆದು ಹಲ್ಲೆ ನಡೆಸಿದ್ದಾನೆ. ಗಂಭೀರವಾಗಿ ಗಾಯಗೊಂಡ ಸುಜಿತ್ ಪಿಂಟೊ ಮೃತಪಟ್ಟಿದ್ದಾನೆ.

Leave a Reply

Your email address will not be published. Required fields are marked *

error: Content is protected !!