October 28, 2026

ಶಿವಮೊಗ್ಗ: ಮನೆಯಲ್ಲಿ ಬಟ್ಟೆಗೆ ಇಸ್ತ್ರಿ ಮಾಡುತ್ತಿದ್ದಾಗ ವಿದ್ಯುತ್ ಶಾಕ್‌: ವಿದ್ಯಾರ್ಥಿ ಸಾವು

0
image_editor_output_image-2061952255-1793162979356

ಶಿವಮೊಗ್ಗ: ಮನೆಯಲ್ಲಿ ಬಟ್ಟೆಗೆ ಇಸ್ತ್ರಿ ಮಾಡುತ್ತಿದ್ದಾಗ ವಿದ್ಯುತ್ ಶಾಕ್‌ನಿಂದ ಬಾಲಕ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ನಗರದ ವಾದಿ-ಏ-ಹುಧಾದಲ್ಲಿ ನಡೆದಿದೆ.

ಉಮರ್ ಫಾರುಕ್ (14) ಮೃತ ದುರ್ದೈವಿ. ಈತ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಬಟ್ಟೆ ಇಸ್ತ್ರಿ ಮಾಡುತ್ತಿದ್ದಾಗ ವಿದ್ಯುತ್ ಸ್ಪರ್ಶಿಸಿ ಪ್ರಜ್ಞೆತಪ್ಪಿ ಬಿದ್ದಿದ್ದಾನೆ. ಆತನನ್ನು ಕುಟುಂಬಸ್ಥರು ಕೂಡಲೇ ಆಸ್ಪತ್ರೆ ಸಾಗಿಸಲು ಯತ್ನಿಸಿದ್ದರು. ಆದರೆ ಮಾರ್ಗ ಮಧ್ಯದಲ್ಲೇ ಬಾಲಕ ಸಾವನ್ನಪ್ಪಿದ್ದಾನೆ.

Leave a Reply

Your email address will not be published. Required fields are marked *

error: Content is protected !!