ಉಡುಪಿ: ಕಾರು, ಸೈಕಲ್ ನಡುವೆ ಭೀಕರ ಅಪಘಾತ: ಕಾರು ಚಾಲಕ, ಸೈಕಲ್ ಸವಾರ ಮೃತ್ಯು
ಉಡುಪಿ: ಕುಂದಾಪುರ ತಾಲೂಕಿನ ಕೋಟ ಜಂಕ್ಷನ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರು ಮತ್ತು ಸೈಕಲ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಕಾರು ಚಾಲಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಇದಕ್ಕೂ ಮುನ್ನ ಸೈಕಲ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದರು.
ಮೃತ ಕಾರು ಚಾಲಕನನ್ನು ಕುಂದಾಪುರ ತಾಲೂಕಿನ ಬೀಜಾಡಿ ನಿವಾಸಿ ಪ್ರದೀಪ್ ಕಾಂಚನ್ (26) ಎಂದು ಗುರುತಿಸಲಾಗಿದೆ. ಸೋಮವಾರ ಮುಂಜಾನೆ ಉಡುಪಿಯಿಂದ ಕುಂದಾಪುರದತ್ತ ಕಾರಿನಲ್ಲಿ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿತ್ತು.




