October 29, 2026

ಸೌಜನ್ಯ ಪ್ರಕರಣ: ಎಸ್‌ಐಟಿ ಮುಖ್ಯಸ್ಥ ಸ್ಥಾನದಿಂದ ಮುಕ್ತಿ ಕೋರಿ ಶಶಿಕುಮಾರ್ ಮನವಿ

0
image_editor_output_image1059163621-1793271234322

ಬೆಂಗಳೂರು: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ವಿಶೇಷ ತನಿಖಾ ತಂಡದ (ಎಸ್‌ಐಟಿ) ಮುಖ್ಯಸ್ಥ ಸ್ಥಾನದಿಂದ ತಮ್ಮನ್ನು ಮುಕ್ತಗೊಳಿಸುವಂತೆ ಹಿರಿಯ ಐಪಿಎಸ್ ಅಧಿಕಾರಿ, ಐಜಿಪಿ ಎನ್. ಶಶಿಕುಮಾರ್ ಅವರು ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿ-ಐಜಿಪಿ) ಎಂ.ಎ. ಸಲೀಂ ಅವರಿಗೆ ಲಿಖಿತ ಮನವಿ ಸಲ್ಲಿಸಿದ್ದಾರೆ.

ಸೌಜನ್ಯ ಸಾವಿಗೆ ನ್ಯಾಯ ಕೋರಿ ಹೋರಾಟ ನಡೆಸುತ್ತಿರುವ ಕುಟುಂಬಸ್ಥರು ಹಾಗೂ ಹೋರಾಟಗಾರರು ಎಸ್‌ಐಟಿ ನೇತೃತ್ವ ವಹಿಸಿರುವ ಐಜಿಪಿ ಶಶಿಕುಮಾರ್ ಅವರ ನೇಮಕಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು.

ಆಕ್ಷೇಪಕ್ಕೆ ಕಾರಣ ಹಾಗೂ ಶಶಿಕುಮಾರ್ ನಿರ್ಧಾರ: ಶಶಿಕುಮಾರ್ ಅವರು ಈ ಹಿಂದೆ ಮಂಗಳೂರು ಪೊಲೀಸ್ ಕಮಿಷನರ್ ಆಗಿ ಕರ್ತವ್ಯ ನಿರ್ವಹಿಸಿದ್ದ ಅವಧಿಯಲ್ಲಿ ಧರ್ಮಸ್ಥಳದ ಜೊತೆಗೆ ಹತ್ತಿರದ ಒಡನಾಟ ಹೊಂದಿದ್ದರು ಎಂಬ ಅಂಶವನ್ನು ಮುನ್ನೆಲೆಗೆ ತಂದಿದ್ದ ಹೋರಾಟಗಾರರು, ಈ ತನಿಖೆಯಿಂದ ಪೂರ್ಣ ಪ್ರಮಾಣದ ನ್ಯಾಯ ಸಿಗುವ ಬಗ್ಗೆ ಅಪಸ್ವರ ಎತ್ತಿದ್ದರು. ತನಿಖಾಧಿಕಾರಿಯ ಕಾರ್ಯವೈಖರಿ ಮೇಲೆಯೇ ಅನುಮಾನ ವ್ಯಕ್ತವಾಗಿದ್ದರಿಂದ, ಈ ವಿವಾದಗಳು ತನಿಖೆಯ ಪಾರದರ್ಶಕತೆ ಹಾಗೂ ನಂಬಿಕೆಗೆ ಧಕ್ಕೆ ತರಬಾರದು ಎಂಬ ಉದ್ದೇಶದಿಂದ ಶಶಿಕುಮಾರ್ ಅವರೇ ಸ್ವಯಂಪ್ರೇರಿತರಾಗಿ ತನಿಖಾ ಹೊಣೆಯಿಂದ ಕೈಬಿಡುವಂತೆ ಡಿಜಿಪಿಯವರಿಗೆ ವಿನಂತಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!