October 30, 2026

ಡ್ರಾಪ್ ಕೊಡುವ ನೆಪದಲ್ಲಿ ಲೈಂಗಿಕ ದೌರ್ಜನ್ಯ: ತಮಿಳಗ ವೆಟ್ರಿ ಕಳಗಂ ಪಕ್ಷದ ಮುಖಂಡನ ಬಂಧನ

ccb5cbcd-0670-4103-ad04-fc9ac7aa77e7

ಚೆನ್ನೈ: ಮಳೆಯಲ್ಲಿ ಡ್ರಾಪ್ ಕೊಡುವ ನೆಪದಲ್ಲಿ ಕಾರು ಹತ್ತಿಸಿಕೊಂಡು ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಮೇಲೆ ತಮಿಳಗ ವೆಟ್ರಿ ಕಳಗಂ ಪಕ್ಷದ ಮುಖಂಡ ಕ್ರಿಸ್ಟೋಫರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಅಕ್ಟೋಬರ್ ತಿಂಗಳ ಆರಂಭದಲ್ಲಿ ಎರಡನೇ ವರ್ಷದ ಸ್ನಾತಕೋತ್ತರ ಪದವಿ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬರು ಕ್ರಿಸ್ಟೋಫರ್ ಅವರ ವಿರುದ್ಧ ದಾಖಲಿಸಿದ್ದರು. ದೂರು ದಾಖಲಾದ ಬಳಿಕ ಕ್ರಿಸ್ಟೋಫರ್ ಪರಾರಿಯಾಗಿದ್ದರು. ಇದೀಗ ಪೊಲೀಸರು ಅವರನ್ನು ಕನ್ಯಾಕುಮಾರಿಯಲ್ಲಿ ಬಂಧಿಸಿದ್ದಾರೆ.

error: Content is protected !!