October 30, 2026

ಮಂಗಳೂರು: ತಲವಾರಿನಿಂದ ಕೊಚ್ಚಿ ಯುವಕನ ಹತ್ಯೆ: ಮೂವರಿಗೆ ಜೀವಾವಧಿ ಶಿಕ್ಷೆ

0
image_editor_output_image-2017450753-1793302126421

ಮಂಗಳೂರು: ತಂಗಿಯನ್ನು ಪ್ರೀತಿಸುತ್ತಿದ್ದನೆಂಬ ಕಾರಣಕ್ಕೆ ಯುವಕನೊಬ್ಬನನ್ನು ತಲವಾರಿನಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿದ್ದ ಪ್ರಕರಣದಲ್ಲಿ ಸುದೀರ್ಘ ವಿಚಾರಣೆ ನಡೆಸಿದ ಮಂಗಳೂರಿನ 6ನೇ ಹೆಚ್ಚುವರಿ ಮತ್ತು ಜಿಲ್ಲಾ ಸತ್ರ ನ್ಯಾಯಾಲಯವು, ನಾಲ್ವರು ಆರೋಪಿಗಳೂ ದೋಷಿಗಳು ಎಂದು ಸಾಬೀತುಪಡಿಸಿ ಜೀವಾವಧಿ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಮಹತ್ವದ ತೀರ್ಪು ಪ್ರಕಟಿಸಿದೆ.

ಘಟನೆಯು ಜನವರಿ 3, 2019 ರಂದು ಮಂಗಳೂರಿನ ಪಂಜಿಮೊಗರು ಮಾಲಾಡಿ ರಸ್ತೆಯ ಎಂ.ವಿ. ಶೆಟ್ಟಿ ಕಾಲೇಜು ಬಳಿ ನಡೆದಿತ್ತು.

ಪ್ರಕರಣದ 1ನೇ ಆರೋಪಿಯಾದ ಸುನಿಲ್ ಕುಮಾರ್ @ ಕೌಟಿ ಎಂಬಾತನ ತಂಗಿಯನ್ನು ರಾಕೇಶ್ ಎಂಬ ಯುವಕ ಪ್ರೀತಿಸುತ್ತಿದ್ದನು ಎಂಬ ಪೂರ್ವದ್ವೇಷದ ಕಾರಣದಿಂದ, ಆರೋಪಿಗಳಾದ (1) ಸುನೀಲ್ ಕುಮಾರ್ @ ಕೌಟಿ, (2) ಪ್ರವೀಣ್ ಪೂಜಾರಿ @ ಚೋಟು, (3) ಪ್ರೀತಮ್ @ ಅಭಿ, ಹಾಗೂ (4) ರೋಹಿತ್ ಕುಮಾರ್ @ ಶೂಟರ್ ಎಂಬುವವರು ಒಟ್ಟಾಗಿ ಸೇರಿ ರಾಕೇಶ್‌ನನ್ನು ತಲವಾರಿನಿಂದ ಕೊಚ್ಚಿ ಕೊಲೆ ಮಾಡಿದ್ದರು.


ಈ ಭೀಕರ ಕೃತ್ಯಕ್ಕೆ ಸಂಬಂಧಿಸಿದಂತೆ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಂದಿನ ಕಾವೂರು ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಶ್ರೀ ಕೆ.ಆರ್. ನಾಯ್ಕ್ ಅವರು ಸಮಗ್ರ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಮಂಗಳೂರಿನ 6ನೇ ಹೆಚ್ಚುವರಿ ಮತ್ತು ಜಿಲ್ಲಾ ಸತ್ರ ನ್ಯಾಯಾಲಯದಲ್ಲಿ ಸುದೀರ್ಘ ವಿಚಾರಣೆ ನಡೆಯಿತು. ಪ್ರಕರಣದ ಗಂಭೀರತೆಯನ್ನು ಪರಿಗಣಿಸಿದ ಮಾನ್ಯ ನ್ಯಾಯಾಧೀಶರಾದ ರಾಜೇಶ್ ಮಾರುತಿ ಕಮಟೆ ಅವರು, ಆರೋಪಿಗಳ ವಿರುದ್ಧದ ಆರೋಪಗಳು ಸಾಬೀತಾಗಿರುವ ಹಿನ್ನೆಲೆಯಲ್ಲಿ ಈ ಕೆಳಗಿನಂತೆ ಕಠಿಣ ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ:

Leave a Reply

Your email address will not be published. Required fields are marked *

error: Content is protected !!