October 31, 2026

ಮೂಡುಬಿದಿರೆ: ಖಾಸಗಿ ಬಸ್‌, ದ್ವಿಚಕ್ರ ವಾಹನಕ್ಕೆ ಢಿಕ್ಕಿ: ತೋಡಾರು ನಿವಾಸಿ ರಿಫಾಝ್ ಮೃತ್ಯು

0
image_editor_output_image1082714858-1793389505046

ಮೂಡುಬಿದಿರೆ : ಖಾಸಗಿ ಬಸ್‌ ವೊಂದು ದ್ವಿಚಕ್ರ ವಾಹನಕ್ಕೆ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಮೃತಪಟ್ಟ ಘಟನೆ ಮಂಗಳೂರು- ಕಾರ್ಕಳ ರಾಷ್ಟ್ರೀಯ ಹೆದ್ದಾರಿಯ ತೋಡಾರು ಎಂಬಲ್ಲಿ ಶುಕ್ರವಾರ ವರದಿಯಾಗಿದೆ.

ತೋಡಾರು ನಿವಾಸಿ ರಿಫಾಝ್ (19) ಮೃತಪಟ್ಟವರು ಎಂದು ತಿಳಿದು ಬಂದಿದೆ. ಇವರು ಮೂಡುಬಿದಿರೆಯಲ್ಲಿ ಹಣ್ಣು ಹಂಪಲು ಮಾರಾಟದ ಅಂಗಡಿಯಲ್ಲಿ ಕೆಲಸಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

ಅಭಿಮಾನ್ ಎಂಬ ಹೆಸರಿನ ಖಾಸಗಿ ಬಸ್‌ ಮಂಗಳೂರಿನಿಂದ ಮೂಡುಬಿದಿರೆಗೆ ಬರುತ್ತಿದ್ದಾಗ ಘಟನೆ ಸಂಭವಿಸಿದೆ. ಸರ್ವಿಸ್ ರಸ್ತೆಯ ಮೂಲಕ ಬರಬೇಕಾಗಿದ್ದ ಬಸ್ ವಿರುದ್ಧ ದಿಕ್ಕಿನಲ್ಲಿ ಅತಿಯಾದ ವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ರಿಫಾಝ್ ಸಂಚರಿಸುತ್ತದ್ದ ದ್ವಿಚಕ್ರ ವಾಹನಕ್ಕೆ ಮುಖಾಮುಖಿಯಾಗಿ ಢಿಕ್ಕಿ ಹೊಡೆಯಿತೆನ್ನಲಾಗಿದೆ.

Leave a Reply

Your email address will not be published. Required fields are marked *

error: Content is protected !!