November 1, 2026

ಡಾ. ಹಾಜಿ ಎಸ್. ಅಬೂಬಕ್ಕರ್ ಆರ್ಲಪದವು ರವರಿಗೆ 2026ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ* 

0
image_editor_output_image-123773190-1793540711359

ಪುತ್ತೂರು : ಗಡಿನಾಡ ಕನ್ನಡಿಗ, ಸಮಾಜ ಸೇವಕರಾದ ಡಾ. ಹಾಜಿ ಎಸ್. ಅಬೂಬಕ್ಕರ್ ಆರ್ಲಪದವು ಅವರು 2026ನೇ ಸಾಲಿನ ಪ್ರತಿಷ್ಠಿತ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಕನ್ನಡ ನಾಡು, ನುಡಿ  ಸಾಹಿತ್ಯ, ಶೈಕ್ಷಣಿಕ ಹಾಗೂ ಸಮಾಜ ಸೇವಾ ಕ್ಷೇತ್ರದಲ್ಲಿ ನಿರಂತರವಾಗಿ ತೊಡಗಿಸಿಕೊಂಡು ಗಡಿನಾಡಿನಲ್ಲಿ ಕನ್ನಡದ ಕಂಪನ್ನು ಪಸರಿಸುತ್ತಿರುವ ಅವರ ಅನುಪಮ ಸೇವೆಗೆ ಈ ಪ್ರಶಸ್ತಿ ನೀಡಿ ಆಯ್ಕೆ ಮಾಡಲಾಗಿದೆ.
ಇವರು 2025ನೇ  ಸಾಲಿನ ತಾಲೂಕು ರಾಜ್ಯೋತ್ಸವ ಪ್ರಶಸ್ತಿ, ಭಾರತ ಸೇವಾ ರತ್ನ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿ ಪುರಸ್ಕಾರ ಗಳನ್ನು ಸ್ವೀಕರಿಸಿದ್ದಾರೆ.

ಪ್ರಸಕ್ತ ದಕ್ಷಿಣ ಕನ್ನಡ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಪ್ಯಾರಾ ಲೀಗಲ್ ವ್ಯಾಲೆಂಟಿಯರ್, ವಿಜ್ಞಾನ ಪರಿಷತ್ತು ಜಿಲ್ಲಾ ಅಧ್ಯಕ್ಷರಾಗಿ ಮತ್ತು ಪುತ್ತೂರು ತಾಲೂಕು ಸೀರತ್ ಕಮಿಟಿಯ ಪ್ರಧಾನ ಕಾರ್ಯದರ್ಶಿಯಾಗಿ ಸೇರಿದಂತೆ ಹಲವಾರು ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!