ಅಕ್ಷಯ ಚಾರಿಟೇಬಲ್ ಟ್ರಸ್ಟ್‌ಗೆ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ
ಸಮಾಜದಲ್ಲಿ ವಿವಿಧ ಸೇವಾ ಚಟುವಟಿಕೆಗಳ ಮೂಲಕ ಗುರುತಿಸಿಕೊಂಡಿರುವ ಅಕ್ಷಯ ಚಾರಿಟೇಬಲ್ ಟ್ರಸ್ಟ್, ಸೇವಾ ಕ್ಷೇತ್ರದಲ್ಲಿ ಸಲ್ಲಿಸಿದ ಗಣನೀಯ ಕೊಡುಗೆಯನ್ನು ಪರಿಗಣಿಸಿ ಈ ಪ್ರಶಸ್ತಿಗೆ ಆಯ್ಕೆಯಾಗಿದೆ.
ಸೇವಾ ಮನೋಭಾವ, ಸಮಾಜಮುಖಿ ಚಿಂತನೆ ಹಾಗೂ ಜನಪರ ಕಾರ್ಯಗಳ ಮೂಲಕ ಸಮಾಜದಲ್ಲಿ ಉತ್ತಮ ಬದಲಾವಣೆ ತರಲು ಶ್ರಮಿಸುತ್ತಿರುವ ಟ್ರಸ್ಟ್‌ನ ಸಾಧನೆಗೆ ಸಾರ್ವಜನಿಕ ವಲಯದಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಈ ಗೌರವವು ಟ್ರಸ್ಟ್‌ನ ಪದಾಧಿಕಾರಿಗಳು, ಸದಸ್ಯರು ಹಾಗೂ ಸೇವಾ ಕಾರ್ಯಗಳಲ್ಲಿ ಸಹಕರಿಸಿದ ಎಲ್ಲರಿಗೂ ಹೆಮ್ಮೆಯ ಕ್ಷಣವಾಗಿದೆ. ಮುಂದಿನ ದಿನಗಳಲ್ಲಿಯೂ ಇನ್ನಷ್ಟು ಸಮಾಜಮುಖಿ ಸೇವಾ ಕಾರ್ಯಗಳನ್ನು ಕೈಗೊಳ್ಳುವ ಮೂಲಕ ಸಮಾಜದ ಅಭಿವೃದ್ಧಿಗೆ ಕೊಡುಗೆ ನೀಡಲಿ ಎಂದು ಗಣ್ಯರು ಹಾಗೂ ಹಿತೈಷಿಗಳು ಅಭಿನಂದನೆ ಸಲ್ಲಿಸಿದ್ದಾರೆ.



