November 2, 2026

ಕಡಬ: ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

0
image_editor_output_image-1602865940-1793589750782

ಕಡಬ: ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ನಾಲ್ಕು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಗಳ ಪೈಕಿ ಒಬ್ಬ ಕಳೆದ ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಮಹಾರಾಷ್ಟ್ರ ಮೂಲದ ವಿಶಾಲ್ ಪೊಂಕೆ (30) ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ.

ಕಡಬ ಪೊಲೀಸ್ ಠಾಣೆಯಲ್ಲಿ 2016ರಲ್ಲಿ ವಿಶಾಲ್ ಪೂಂಕೆ ವಿರುದ್ಧ ಕಳ್ಳತನ ಪ್ರಕರಣ ದಾಖಲಾಗಿತ್ತು. ಈ ಪ್ರಕರಣಗಳಲ್ಲಿ ಆರೋಪಿಗಳಾಗಿದ್ದ ದೊಡ್ಡಬಳ್ಳಾಪುರದ ನರಸಿಂಹ ಅಲಿಯಾಸ್ ರಾಜು, ಮಹಾರಾಷ್ಟ್ರದ ವಿಜಯ್ ಸುರೇಶ್ ಪೊಂಕೆ, ನವೀನ್ ಚಂದ್ರ ಸಿಂಗ್, ಉತ್ತರ ಕನ್ನಡದ ಚಂದ್ರಕಾಂತ್ ಪೂಜಾರಿ ಹಾಗೂ ಮಂಡ್ಯದ ಪ್ರಕಾಶ್ ಬಹದ್ದೂರ್ ಅವರಿಗೆ ಈಗಾಗಲೇ ಪುತ್ತೂರಿನ ಎಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯವು ಎರಡು ವರ್ಷಗಳ ಶಿಕ್ಷೆ ವಿಧಿಸಿತ್ತು. ಇದೇ ಪ್ರಕರಣಗಳಲ್ಲಿ ಭಾಗಿಯಾಗಿದ್ದ ವಿಶಾಲ್ ಪೊಂಕೆ ಕಳೆದ ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದರು.

ಆವರ ಪತ್ತೆಗಾಗಿ ಪೊಲೀಸರು ಪ್ರಯತ್ನ ನಡೆಸಿದ್ದು, ಆರೋಪಿಯ ವಿರುದ್ಧ ನ್ಯಾಯಾಲಯದಿಂದ ಪ್ರೊಕ್ಲಮೇಶನ್ ಹೊರಡಿಸಲಾಗಿತ್ತು. ಅಕ್ಟೋಬರ್ 30ರಂದು ವಿಶಾಲ್ ಪೊಂಕೆ ಪುತ್ತೂರಿನ 2ನೇ ಎಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯ (ಸಂಚಾರಿ ನ್ಯಾಯಾಲಯ, ಕಡಬ)ಕ್ಕೆ ಹಾಜರಾದರು. ನ್ಯಾಯಾಲಯವು ಅವರನ್ನುನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

Leave a Reply

Your email address will not be published. Required fields are marked *

error: Content is protected !!