November 2, 2026

ಬಂಟ್ವಾಳ: ಮಾದಕ ದ್ರವ್ಯ ಸೇವಿಸಿ ಸಾರ್ವಜನಿಕರಿಗೆ ತೊಂದರೆ: ಯುವಕನ ಬಂಧನ, ಮತ್ತೋರ್ವ ಆರೋಪಿ ಪರಾರಿ

0
image_editor_output_image-2043403896-1793604332731

ಬಂಟ್ವಾಳ: ಪಾಣೆಮಂಗಳೂರಿನ ನೆಹರೂ ನಗರ ಅಂಡರ್‌ಪಾಸ್ ಬಳಿ ಮಾದಕ ದ್ರವ್ಯ ಸೇವಿಸಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ಯುವಕನೊಬ್ಬನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ. ಘಟನೆಯಲ್ಲಿ ಭಾಗಿಯಾಗಿದ್ದ ಮತ್ತೋರ್ವ ಆರೋಪಿ ಪೊಲೀಸರು ಸ್ಥಳಕ್ಕೆ ತಲುಪುತ್ತಿದ್ದಂತೆ ಪರಾರಿಯಾಗಿದ್ದಾನೆ.

ಬಂಧಿತ ಯುವಕನನ್ನು ಉಳ್ಳಾಲ ತಾಲೂಕಿನ ಬೋಳಿಯಾರ್ ನಿವಾಸಿ ಮಹಮ್ಮದ್ ನಾಸೀರ್ (29) ಎಂದು ಗುರುತಿಸಲಾಗಿದೆ. ಆತನ ವಿರುದ್ಧ ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್ಸ್ಟೆನ್ಸಸ್ ಆಕ್ಟ್, 1985 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಅಕ್ಟೋಬರ್ 30 ರಂದು ರಾತ್ರಿ 9.15 ರ ಸುಮಾರಿಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯ ಉಪನಿರೀಕ್ಷಕ (ಪಿಎಸ್‌ಐ) ಸಂದೀಪ್ ಕುಮಾರ್ ಶೆಟ್ಟಿ ಅವರು ಸಿಬ್ಬಂದಿಯೊಂದಿಗೆ ಗಸ್ತು ತಿರುಗುತ್ತಿದ್ದಾಗ ಈ ಘಟನೆ ಬೆಳಕಿಗೆ ಬಂದಿದೆ. ಗಸ್ತಿನ ವೇಳೆಯಲ್ಲಿ, ನೆಹರೂ ನಗರ ಅಂಡರ್‌ಪಾಸ್ ಬಳಿ ಇಬ್ಬರು ವ್ಯಕ್ತಿಗಳು ಮಾದಕ ದ್ರವ್ಯ ಸೇವಿಸಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಅಸಭ್ಯವಾಗಿ ವರ್ತಿಸುತ್ತಿದ್ದಾರೆ ಎಂಬ ಮಾಹಿತಿ ಪೊಲೀಸರಿಗೆ ಸಿಕ್ಕಿತ್ತು.

ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸ್ ತಂಡ ಸ್ಥಳಕ್ಕೆ ದೌಡಾಯಿಸಿದೆ. ಆದರೆ ಪೊಲೀಸರನ್ನು ಕಂಡು ಇಬ್ಬರಲ್ಲಿ ಒಬ್ಬ ಪರಾರಿಯಾಗಿದ್ದು, ಮತ್ತೊಬ್ಬನನ್ನು ತಡೆದು ವಿಚಾರಣೆ ನಡೆಸಲಾಗಿದೆ.

Leave a Reply

Your email address will not be published. Required fields are marked *

error: Content is protected !!