November 3, 2026

ನನ್ನ ವ್ಯಕ್ತಿತ್ವಕ್ಕೆ ಧಕ್ಕೆಯಾದ್ರೆ ಮುಂದಿನ ಚುನಾವಣೆಯಲ್ಲಿ ಪ್ರಚಾರಕ್ಕೆ ಬರಲ್ಲ: ಸಿದ್ದರಾಮಯ್ಯ

9a3a09c0-663d-4235-b5fc-98857e6d94eb

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಅವರನ್ನ ದೆಹಲಿಯಲ್ಲಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ, ತಮ್ಮ ವಿರುದ್ಧ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳು ಹಾಗೂ ಸ್ಟಿಂಗ್ ಆಪರೇಷನ್‌ ವಿಡಿಯೋ ವಿಚಾರವಾಗಿ ತೀವ್ರ ಅಸಮಾಧಾನ ಹೊರಹಾಕಿದ್ದಾರೆ ಎಂದು ಆಪ್ತ ಮೂಲಗಳು ತಿಳಿಸಿವೆ.

ರಾಹುಲ್‌ ಗಾಂಧಿ ಅವರೊಂದಿಗೆ ಮಾತುಕತೆ ನಡೆಸಿರುವ ಸಿಎಂ, ಸ್ಟಿಂಗ್‌ ಆಪರೇಷನ್‌ ವಿಚಾರ ಪ್ರಸ್ತಾಪಿಸುವಾಗ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆಂದು ತಿಳಿದುಬಂದಿದೆ.

ನಿಮ್ಮ ಮಾತಿಗೆ ಗೌರವ ನೀಡಿ ರಾಜೀನಾಮೆ ನೀಡಿದೆ. ಮುಂದೆ ಚುನಾವಣೆಯಲ್ಲೂ ಸ್ಪರ್ಧಿಸಲ್ಲ ಎಂದು ಹೇಳಿದ್ದೇನೆ. ನಾನು ಮತ್ತೆ ಮುಖ್ಯಮಂತ್ರಿ ಹುದ್ದೆಯ ಸ್ಪರ್ಧಿಯೂ ಅಲ್ಲ. ಅದಾಗ್ಯೂ ಈ ರಾಜಕೀಯ ಷ್ಯಡ್ಯಂತ್ರ ನಡೆಸಿದ್ದು ಯಾರು? ವಿಡಿಯೋ ಹಂಚಿಕೊಂಡಿದ್ದು ಯಾರು ಅಂತಾ ನನಗೆ ಗೊತ್ತಿದೆ. ಆದರೆ ವಿಡಿಯೋ ಮಾಡಿದ್ದು ಯಾರು, ಅದರ ಹಿಂದಿನ ಉದ್ದೇಶ ಏನು? ರಾಜೀನಾಮೆ ಬಳಿಕ ನನ್ನ ಹೆಸರಿಗೆ ಏಕೆ ಧಕ್ಕೆ ತರಲಾಗುತ್ತಿದೆ. ಇದರಿಂದ ನನಗೆ ತೀವ್ರ ಬೇಸರವಾಗಿದೆ ಎಂದು ಹೇಳಿಕೊಂಡಿದ್ದಾರೆ ಎಂದು ಆಪ್ತ ಮೂಲಗಳು ತಿಳಿಸಿವೆ.

error: Content is protected !!