November 3, 2026

ಮಡಿಕೇರಿ: ಆಟೋದಲ್ಲಿದ್ದ 4.04 ಲಕ್ಷ ರೂ. ಮೌಲ್ಯದ MDMA ವಶ: ಇಬ್ಬರ ಬಂಧನ

45d32223-a1ed-46f6-b127-06016683a950

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಾದಕ ವಸ್ತುಗಳ ಮಾರಾಟ ಜಾಲದ ವಿರುದ್ಧ ಪೊಲೀಸರ ಕಾರ್ಯಾಚರಣೆ ಮುಂದುವರಿದಿದೆ.

ಮಡಿಕೇರಿ ನಗರದಲ್ಲೇ MDMA ಮಾದಕ ವಸ್ತು ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ. ಆಟೋ ರಿಕ್ಷಾದಲ್ಲೇ ಮಾದಕ ವಸ್ತುಗಳನ್ನು ಇಟ್ಟುಕೊಂಡು ಮಾರಾಟಕ್ಕೆ ಸಿದ್ಧತೆ ನಡೆಸುತ್ತಿದ್ದ ವೇಳೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು, ಬರೋಬ್ಬರಿ 4 ಲಕ್ಷಕ್ಕೂ ಅಧಿಕ ಮೌಲ್ಯದ MDMA ವಶಪಡಿಸಿಕೊಂಡಿದ್ದಾರೆ.

ಮಡಿಕೇರಿ ನಗರದ ಗೌಳಿಬೀದಿಯ ಕಂಚಿ ಕಾಮಾಕ್ಷಿ ದೇವಸ್ಥಾನದ ಬಳಿಯ ಸಾರ್ವಜನಿಕ ಮೈದಾನದಲ್ಲಿ ಆಟೋ ರಿಕ್ಷಾದಲ್ಲೇ ಮಾದಕ ವಸ್ತುಗಳನ್ನು ಇಟ್ಟುಕೊಂಡು ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಗಳನ್ನ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಮಡಿಕೇರಿ ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನ 29 ವರ್ಷದ ರುಹೇಜ್ ಶೇಖ್ ಹಾಗೂ 19 ವರ್ಷದ ಮೊಹಮ್ಮದ್ ಶಾಕೀಬ್ ಎಂದು ಗುರುತಿಸಲಾಗಿದೆ.

error: Content is protected !!