6 ವರ್ಷದ ಮಗನೊಂದಿಗೆ 18ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ
ಪುಣೆ: 33 ವರ್ಷದ ಮಹಿಳೆಯೊಬ್ಬರು ತಮ್ಮ ಆರು ವರ್ಷದ ಮಗನೊಂದಿಗೆ ವಸತಿ ಕಟ್ಟಡದ 18ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ಪಿಂಪ್ರಿ-ಚಿಂಚ್ವಾಡ್ನಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ಏಕ್ತಾ ಬಂಗಾಡ್ (33) ಎಂದು ಗುರುತಿಸಲಾಗಿದೆ. ಅವರ ಆರು ವರ್ಷದ ಮಗ ಮಾಧವ್ ಕೂಡ ಮೃತಪಟ್ಟಿದ್ದಾನೆ. ಶುಕ್ರವಾರ ಸಂಜೆ ಸುಮಾರು 6:30ರ ವೇಳೆಗೆ ಪಿಂಪ್ರಿ-ಚಿಂಚ್ವಾಡ್ನ ಸಿಗ್ನೇಚರ್ ಪಾರ್ಕ್ ವಸತಿ ಸಮುಚ್ಚಯದಲ್ಲಿ ಈ ಘಟನೆ ನಡೆದಿದೆ. ಏಕ್ತಾ ಅವರು ಪತಿ ಮನೋಜ್ ಬಂಗಾಡ್ ಮತ್ತು ಮಗನೊಂದಿಗೆ ವಾಸವಾಗಿದ್ದರು. ಮನೋಜ್ ಪುಣೆಯ ಐಟಿ ಕಂಪನಿಯೊದರಲ್ಲಿ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದಾರೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಏಕ್ತಾ ತಮ್ಮ ಮಗನನ್ನು ಕಟ್ಟಡದ 18ನೇ ಮಹಡಿಯ ಕಾರಿಡಾರ್ಗೆ ಕರೆದೊಯ್ದು ಅಲ್ಲಿಂದ ಕೆಳಗೆ ಜಿಗಿದಿದ್ದಾರೆ ಎನ್ನಲಾಗಿದೆ. ಘಟನೆಯಲ್ಲಿ ತಾಯಿ ಮತ್ತು ಮಗ ಇಬ್ಬರೂ ಮೃತಪಟ್ಟಿದ್ದಾರೆ.




