November 4, 2026

ಒಮನ್ ಸರಕು ಸಾಗಣೆ ಹಡಗಿನ ಮೇಲೆ ದಾಳಿ: ಭಾರತೀಯ ನಾವಿಕ ಸಾವು

8bec3cb6-8707-4457-9094-eb13400bb725

ಮಸ್ಕತ್: ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ನಡುವೆಯೇ ಒಮನ್ ಕರಾವಳಿಯಲ್ಲಿ ಭಾರತದ ಧ್ವಜ ಹೊಂದಿದ್ದ ಸರಕು ಸಾಗಣೆ ಹಡಗಿನ ಮೇಲೆ ದಾಳಿ ನಡೆದಿದೆ. ಈ ಘಟನೆಯಲ್ಲಿ ಗುಜರಾತ್ ಮೂಲದ ಓರ್ವ ಭಾರತೀಯ ನಾವಿಕ ಮೃತಪಟ್ಟಿದ್ದು, ಉಳಿದ 13 ಮಂದಿ ನಾವಿಕರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ.

`ಅಲ್ ಜುಸುಫಿ’ ಹೆಸರಿನ ಹಡಗು ಒಮನ್ ಕರಾವಳಿಯಲ್ಲಿ ಸಾಗುತ್ತಿದ್ದಾಗ ವೈಮಾನಿಕ ವಸ್ತುವೊಂದು ಹಡಗಿನ ಮೇಲೆ ದಾಳಿ ನಡೆಸಿದೆ. ಈ ಹಡಗಿನಲ್ಲಿ ಒಟ್ಟು 14 ಮಂದಿ ಭಾರತೀಯ ನಾವಿಕರಿದ್ದರು ಎಂದು ಕೇಂದ್ರ ಬಂದರು, ಹಡಗು ಮತ್ತು ಜಲಮಾರ್ಗ ಸಚಿವ ಸರ್ಬಾನಂದ ಸೋನೋವಾಲ್ ತಿಳಿಸಿದ್ದಾರೆ.

error: Content is protected !!