November 6, 2026

ಕಾಸರಗೋಡು: ತೋಟದಲ್ಲಿ ಅಂಗನವಾಡಿ ಶಿಕ್ಷಕಿ ಮೃತದೇಹ ಪತ್ತೆ

0
image_editor_output_image-822624616-1793907374135

ಕಾಸರಗೋಡು: ಆದೂರು ಬೇಂಗತ್ತಡ್ಕದ ಗೇರು ನಿಗಮದ ತೋಟದಲ್ಲಿ ಅಂಗನವಾಡಿ ಶಿಕ್ಷಕಿಯೊಬ್ಬರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಬೇಂಗತ್ತಡ್ಕ ನಿವಾಸಿ ಬೇಬಿ (46) ಮೃತರು.

ಬುಧವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ಅಂಗನವಾಡಿ ಸಮೀಪದ ಗೇರು ನಿಗಮದ ತೋಟದಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ವಿಷ ಸೇವಿಸಿರುವುದೇ ಸಾವಿಗೆ ಕಾರಣವೆಂದು ಪ್ರಾಥಮಿಕವಾಗಿ ಶಂಕಿಸಲಾಗಿದೆ. ಘಟನೆಯ ಮಾಹಿತಿ ತಿಳಿದು ಆದೂರು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.

ಬಳಿಕ ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಗೆ ಸಾಗಿಸಿ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಈ ಕುರಿತು ಆದೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!