November 6, 2026

ಮೂಡುಬಿದಿರೆ: ಪೊಲೀಸರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ: ಆರೋಪಿಯ ಬಂಧನ

0
image_editor_output_image-1494363207-1793907829305

ಮೂಡುಬಿದಿರೆ: ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯ ಮಹಾವೀರ ಕಾಲೇಜು ಬಳಿ ರಸ್ತೆ ಗುಂಡಿ ಬಿದ್ದಿದೆ ಎಂಬ ನೆಪವೊಡ್ಡಿ ರಾಜ್ಯ ಹೆದ್ದಾರಿಗೆ ಅಡ್ಡಲಾಗಿ ವಾಹನವಿಟ್ಟು ಭಾರಿ ಸಂಚಾರ ದಟ್ಟಣೆ ಉಂಟುಮಾಡಿದ್ದಲ್ಲದೆ, ಸ್ಥಳಕ್ಕೆ ಬಂದ ಪೊಲೀಸ್ ಅಧಿಕಾರಿಗಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ವ್ಯಕ್ತಿಯನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಪುಚ್ಚಮೊಗರು ನಿವಾಸಿ ಪ್ರಶಾಂತ್ ಅಲಿಯಾಸ್ ಪಚ್ಚು (35) ಎಂದು ಗುರುತಿಸಲಾಗಿದೆ. ನವೆಂಬರ್ 2 ರಂದು ಸಂಜೆ ಸುಮಾರು 6:30 ಗಂಟೆಯ ಸುಮಾರಿಗೆ ಮೂಡುಬಿದಿರೆ ಬಳಿಯ ಪ್ರಾಂತ್ಯ ಗ್ರಾಮದ ಮಹಾವೀರ ಕಾಲೇಜಿನ ಮಾರಿಗುಡಿ ಬಳಿ ಆರೋಪಿ ಪ್ರಶಾಂತ್ ತನ್ನ ಮೋಟಾರು ಸೈಕಲನ್ನು ರಾಜ್ಯ ಹೆದ್ದಾರಿಗೆ ಅಡ್ಡಲಾಗಿ ನಿಲ್ಲಿಸಿದ್ದನು.

ರಸ್ತೆಯಲ್ಲಿ ಸಂಚರಿಸುತ್ತಿದ್ದ ವಾಹನಗಳನ್ನು ಬಲವಂತವಾಗಿ ತಡೆದು, “ರಸ್ತೆಯಲ್ಲಿ ಉಂಟಾಗಿರುವ ಹೊಂಡ-ಗುಂಡಿಗಳನ್ನು ಮುಚ್ಚಲು ಶಾಸಕರು, ಸಂಸದರು ಹಾಗೂ ಜನಪ್ರತಿನಿಧಿಗಳು ಕೂಡಲೇ ಸ್ಥಳಕ್ಕೆ ಬರಬೇಕು. ತಕ್ಷಣವೇ ಡಾಮರೀಕರಣ ಮಾಡಬೇಕು. ಇಲ್ಲದಿದ್ದರೆ ಈ ರಸ್ತೆಯಲ್ಲಿ ಯಾವುದೇ ವಾಹನ ಹಾಗೂ ಸಾರ್ವಜನಿಕರ ಸಂಚಾರಕ್ಕೆ ಅವಕಾಶ ನೀಡುವುದಿಲ್ಲ” ಎಂದು ಉದ್ಧಟತನ ಪ್ರದರ್ಶಿಸಿದ್ದನು.

ಆರೋಪಿಯ ಈ ಕೃತ್ಯದಿಂದಾಗಿ ಮೂಡುಬಿದಿರೆಯಿಂದ ಬೆಳ್ತಂಗಡಿ ಕಡೆಗೆ ಹೋಗುವ ಪ್ರಮುಖ ರಾಜ್ಯ ಹೆದ್ದಾರಿಯಲ್ಲಿ ಎರಡೂ ಬದಿಗಳಲ್ಲಿ ಸುಮಾರು ನೂರಾರು ವಾಹನಗಳು ಸಾಲುಗಟ್ಟಿ ನಿಂತು ವಾಹನ ಸವಾರರು ಹಾಗೂ ಸಾರ್ವಜನಿಕರು ತೀವ್ರ ಪರದಾಟ ನಡೆಸುವಂತಾಯಿತು.

Leave a Reply

Your email address will not be published. Required fields are marked *

error: Content is protected !!