November 6, 2026

ಗರ್ಭಿಣಿ ಪತ್ನಿ ಎದುರೇ ಪತಿಗೆ ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು

0
image_editor_output_image-775439938-1793908100586

ವಿಜಯಪುರ: ಗರ್ಭಿಣಿ ಪತ್ನಿ ಎದುರೇ ಪತಿಗೆ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈದ ಘಟನೆ ವಿಜಯಪುರದ ನೆಹರು ನಗರದ ಮುಂಡೆವಾಡಿ ಆಸ್ಪತ್ರೆ ಬಳಿ ನಡೆದಿದೆ.

ಅಫ್ಜಲ್‌ಪುರದ ಟಕ್ಕೆ ಮೂಲದ ಯಾಸೀನ್ ಜುಬೇರಿ (34) ಹತ್ಯೆಯಾದ ದುರ್ದೈವಿ. ಗರ್ಭಿಣಿ ಪತ್ನಿಯನ್ನು ಯಾಸೀನ್‌ ಆಸ್ಪತ್ರೆಗೆ ಕರೆತಂದಿದ್ದಾಗ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಇದರಿಂದ ಸ್ಥಳದಲ್ಲೇ ಅವರು ಸಾವನ್ನಪ್ಪಿದ್ದಾರೆ. ದುಷ್ಕರ್ಮಿಗಳು ಮೂರು ಸುತ್ತು ಗುಂಡು ಹಾರಿಸಿರುವ ಶಂಕೆ ವ್ಯಕ್ತವಾಗಿದೆ.

Leave a Reply

Your email address will not be published. Required fields are marked *

error: Content is protected !!