November 6, 2026

ಮಂಗಳೂರು: LSD ಡ್ರಗ್ಸ್ ಮಾರಾಟ: ಇಬ್ಬರು ಆರೋಪಿಗಳ  ಬಂಧನ

0
image_editor_output_image-368471748-1793908661934

ಮಂಗಳೂರು: ಮಂಗಳೂರು ನಗರದಲ್ಲಿ ನಿಷೇಧಿತ ಮಾದಕವಸ್ತು ಎಲ್‌ಎಸ್‌ಡಿ (LSD) ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಮಂಗಳೂರು ನಗರ ಅಪರಾಧ ಪತ್ತೆ ದಳದ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳಿಂದ ಸುಮಾರು ₹3 ಲಕ್ಷ ಮೌಲ್ಯದ 100 ಎಲ್‌ಎಸ್‌ಡಿ ಡ್ರಗ್ಸ್‌ ಸ್ಟ್ರಿಪ್‌ಗಳು ಹಾಗೂ ಮೂರು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ₹3.35 ಲಕ್ಷ ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತರನ್ನು ಮಂಗಳೂರಿನ ಅಳಪೆ, ಪಡೀಲ್ ನಿವಾಸಿ ನಿಹಾಲ್ ಸ್ಯಾಂಪ್ರೆಸ್‌ ರೋಡ್ರಿಗಸ್ (30) ಹಾಗೂ ಉರ್ವಸ್ಟೋರ್ ದಡ್ಡಲಕಾಡ್ ನಿವಾಸಿ ಸಿದ್ದಾರ್ಥ ಶೆಟ್ಟಿ (35) ಎಂದು ಗುರುತಿಸಲಾಗಿದೆ.

ಬೆಂಗಳೂರು ನಗರದಿಂದ ಎಲ್‌ಎಸ್‌ಡಿ ಡ್ರಗ್ಸ್‌ ಸ್ಟ್ರಿಪ್‌ಗಳನ್ನು ಖರೀದಿಸಿ ಮಂಗಳೂರಿಗೆ ತಂದು, ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಸಿಸಿಬಿ ಪೊಲೀಸರು ನ.3ರಂದು ಮಧ್ಯಾಹ್ನ ನಗರದ ಪಡೀಲ್ ರೈಲ್ವೆ ಸೇತುವೆ ಬಳಿ ಕಾರ್ಯಾಚರಣೆ ನಡೆಸಿದ್ದರು. ಈ ವೇಳೆ ಇಬ್ಬರು ಆರೋಪಿಗಳನ್ನು ಬಂಧಿಸಿ, ಅವರಿಂದ 100 ಎಲ್‌ಎಸ್‌ಡಿ ಡ್ರಗ್ಸ್ ಸ್ಟ್ರಿಪ್‌ಗಳು ಹಾಗೂ ಮೂರು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!