ಉಡುಪಿ: ಮಠದ ವಿಗ್ರಹಗಳ ಮಾರಾಟ: ಎಫ್‌ಐಆರ್ ದಾಖಲಾದ ಬೆನ್ನಲ್ಲೇ ಸ್ವಾಮೀಜಿ ನಾಪತ್ತೆ
ಉಡುಪಿ:ಬ್ರಹ್ಮಾವರ ತಾಲೂಕಿನ ಬಾಳೆಕುದ್ರು ಮಠದ ಪ್ರಾಚೀನ ವಿಗ್ರಹಗಳನ್ನು ಮಾರಾಟ ಮಾಡಿದ ಆರೋಪದಡಿ ಎಫ್‌ಐಆರ್ ದಾಖಲಾದ ಬೆನ್ನಲ್ಲೇ ಪೀಠಾಧಿಪತಿ ಶ್ರೀ ವಾಸುದೇವ ಸದಾಶಿವಾಶ್ರಮ ಸ್ವಾಮೀಜಿ ತಲೆಮರೆಸಿಕೊಂಡಿದ್ದು,ಪೊಲೀಸರು ಶೋಧ ನಡೆಸುತ್ತಿದ್ದಾರೆ.
ಪುರಾತನ ವಿಗ್ರಹಗಳನ್ನು ಬೆಂಗಳೂರಿನ ಕಂಪನಿಯೊಂದಕ್ಕೆ ಮಾರಾಟ ಮಾಡಲಾಗಿದೆ ಎಂಬ ಆರೋಪ ಮಠಾಧೀಶರ ಮೇಲೆ ಕೇಳಿಬಂದಿದ್ದು, ಬೆಂಗಳೂರು ಪೊಲೀಸರು ತನಿಖೆ ನಡೆಸುತ್ತಿದ್ದು, ಈಗಾಗಲೇ ವಿಗ್ರಹ ಖರೀದಿಸಿದ ಕಂಪನಿಯೊಂದರ ಮಾಲಕ ನಾಗೇಂದ್ರ ಪ್ರಸಾದ್ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ವಾಸುದೇವ ಸದಾಶಿವಾಶ್ರಮ ಸ್ವಾಮೀಜಿ, ಮಠದ ಆಡಳಿತಾಧಿಕಾರಿ ಅನಿಲ್ ಕುಮಾರ್, ಅಕೌಂಟೆಂಟ್ ಜಯಲಕ್ಷ್ಮೀ, ಮಠದಲ್ಲಿದ್ದ ಶ್ರೇಯಸ್ ಹಾಗೂ ಖರೀದಿದಾರ ನಾಗೇಂದ್ರ ಪ್ರಸಾದ್ ಹೆಸರು ಎಫ್‌ಐಆರ್ ನಲ್ಲಿ ದಾಖಲಿಸಲಾಗಿದೆ.
ಪ್ರಕರಣ ದಾಖಲಿಸಿ ಪೊಲೀಸರು ತನಿಖೆಗಿಳಿದ ಬೆನ್ನಲ್ಲೇ ಮಠಕ್ಕೆ ಬೀಗ ಹಾಕಿ ಸ್ವಾಮೀಜಿ ನಾಪತ್ತೆಯಾಗಿದ್ದು, ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ




