November 6, 2026

ಮಂಗಳೂರು: 3.8 ಕೆ.ಜಿ. ಗಾಂಜಾ ಸಹಿತ ಯುವಕನ ಬಂಧನ: 3.94 ಲಕ್ಷ ರೂ. ಮೌಲ್ಯದ ಗಾಂಜಾ, ಕಾರು ಹಾಗೂ ಮೊಬೈಲ್ ವಶ

0
image_editor_output_image-540408745-1793938732864

ಮಂಗಳೂರು: ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಯುವಕನೋರ್ವನನ್ನು ಪಣಂಬೂರು ಪೊಲೀಸರು ಬಂಧಿಸಿ, ಸುಮಾರು 3 ಕೆ.ಜಿ. 800 ಗ್ರಾಂ ತೂಕದ ಗಾಂಜಾ ಸೇರಿದಂತೆ ಒಟ್ಟು 3.94 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ನವೆಂಬರ್ 5ರಂದು ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಜೋಕಟ್ಟೆ ಕ್ರಾಸ್ ರೈಲ್ವೆ ಬ್ರಿಡ್ಜ್ ಬಳಿ ಗಾಂಜಾ ಮಾರಾಟಕ್ಕೆ ತಂದಿರುವ ಬಗ್ಗೆ ಲಭಿಸಿದ ಖಚಿತ ಮಾಹಿತಿಯ ಮೇರೆಗೆ ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ತಂಡ ಹಾಗೂ ಪಣಂಬೂರು ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಜಂಟಿಯಾಗಿ ದಾಳಿ ನಡೆಸಿದರು.

ಈ ಸಂದರ್ಭದಲ್ಲಿ ಪುತ್ತೂರು ತಾಲೂಕಿನ ಪಡ್ನೂರು ಅಂಚೆ ವ್ಯಾಪ್ತಿಯ ಪಡ್ಡಾಯೂರು ಹೌಸ್ ನಿವಾಸಿ ಮೊಹಮ್ಮದ್ ನಿಸಾರ್ (23) ಎಂಬಾತನನ್ನು ಬಂಧಿಸಲಾಯಿತು.

ಆರೋಪಿಯಿಂದ ಸುಮಾರು 3 ಕೆ.ಜಿ. 800 ಗ್ರಾಂ ಗಾಂಜಾ (ಅಂದಾಜು ಮೌಲ್ಯ 1.90 ಲಕ್ಷ ರೂ.), 4 ಸಾವಿರ ರೂ. ಮೌಲ್ಯದ ಮೊಬೈಲ್ ಫೋನ್ ಹಾಗೂ ಗಾಂಜಾ ಸಾಗಾಟಕ್ಕೆ ಬಳಸುತ್ತಿದ್ದ ಸುಮಾರು 2 ಲಕ್ಷ ರೂ. ಮೌಲ್ಯದ ಕೆಎಲ್ 14 1662 ನೋಂದಣಿ ಸಂಖ್ಯೆಯ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಆರೋಪಿಯು ಸುರತ್ಕಲ್, ಪಣಂಬೂರು, ಕಾವೂರು ಹಾಗೂ ಮಂಗಳೂರು ನಗರದ ಪ್ರಮುಖ ಸ್ಥಳಗಳಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದನೆಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಅಲ್ಲದೆ, ಈ ಹಿಂದೆಯೂ ಹಲವು ಬಾರಿ ಮಂಗಳೂರು ನಗರದಲ್ಲಿ ಗಾಂಜಾ ಮಾರಾಟ ಮಾಡಿರುವುದಾಗಿ ವಿಚಾರಣೆ ವೇಳೆ ತಿಳಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ ಪಣಂಬೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 137/2026ರಂತೆ ಎನ್‌ಡಿಪಿಎಸ್ ಕಾಯ್ದೆಯ ಕಲಂ 8(C), 20(b)(ii)(A) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!