November 7, 2026

ವಿಟ್ಲ ಬ್ಲಾಕ್ ಕಾಂಗ್ರೆಸ್ ಮಾಸಿಕ ಸಭೆ ಸಂಪನ್ನ: ಪಕ್ಷ ಸಂಘಟನೆ, ಮಹಿಳಾ ಸಮಾವೇಶ ಹಾಗೂ ಮುಂಬರುವ ಚುನಾವಣೆಗಳ ಸಿದ್ಧತೆ ಕುರಿತು ಮಹತ್ವದ ಚರ್ಚೆ

0
image_editor_output_image-185986902-1794054710702

ವಿಟ್ಲ ಬ್ಲಾಕ್ ಕಾಂಗ್ರೆಸ್ ಮಾಸಿಕ ಸಭೆ ಸಂಪನ್ನ

ಪಕ್ಷ ಸಂಘಟನೆ, ಮಹಿಳಾ ಸಮಾವೇಶ ಹಾಗೂ ಮುಂಬರುವ ಚುನಾವಣೆಗಳ ಸಿದ್ಧತೆ ಕುರಿತು ಮಹತ್ವದ ಚರ್ಚೆ

ವಿಟ್ಲ: ವಿಟ್ಲ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಬ್ಲಾಕ್ ಅಧ್ಯಕ್ಷ ಪದ್ಮನಾಭ ಪೂಜಾರಿ ಸಣ್ಣಗುತ್ತು ಅವರ ಅಧ್ಯಕ್ಷತೆಯಲ್ಲಿ ಮಾಸಿಕ ಸಭೆ ನಡೆಯಿತು.

ಸಭೆಯಲ್ಲಿ ಪಕ್ಷ ಸಂಘಟನೆ ಬಲಪಡಿಸುವುದು, ಮುಂಬರುವ ಕಾರ್ಯಕ್ರಮಗಳು ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣಾ ಸಿದ್ಧತೆಗಳ ಕುರಿತು ವಿಸ್ತೃತ ಚರ್ಚೆ ನಡೆಸಿ ಹಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಯಿತು.

ಪ್ರತಿ ವಲಯದಲ್ಲೂ ಕಡ್ಡಾಯವಾಗಿ ಮಾಸಿಕ ಸಭೆ ನಡೆಸಿ ವರದಿ ಸಲ್ಲಿಸುವಂತೆ ಸೂಚಿಸಲಾಯಿತು. ಮಂಗಳೂರಿನಲ್ಲಿ ನಡೆಯಲಿರುವ ಬೃಹತ್ ಮಹಿಳಾ ಸಮಾವೇಶಕ್ಕೆ ಪ್ರತಿ ಬೂತ್‌ನಿಂದ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸುವಂತೆ ಕರೆ ನೀಡಲಾಯಿತು. ಮುಂಬರುವ ದಿನಗಳಲ್ಲಿ ಪ್ರತಿ ವಲಯ ವ್ಯಾಪ್ತಿಯಲ್ಲಿ ಬಲಿಷ್ಠ ಘಟಕ ಸಮಿತಿಗಳನ್ನು ರಚಿಸಲು ನಿರ್ಧರಿಸಲಾಯಿತು.

ಇದಲ್ಲದೆ, ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ತಳಮಟ್ಟದಿಂದಲೇ ಸಿದ್ಧತೆಗಳನ್ನು ಚುರುಕುಗೊಳಿಸುವುದು, ‘ಜನ ಮನ’ ಕಾರ್ಯಕ್ರಮದ ಪ್ರಚಾರವನ್ನು ವಲಯ ಮಟ್ಟದಲ್ಲಿ ಪರಿಣಾಮಕಾರಿಯಾಗಿ ತಲುಪಿಸುವುದು ಹಾಗೂ ‘Vote Bachao Desh Bachao’ ಅಭಿಯಾನವನ್ನು ಯಶಸ್ವಿಗೊಳಿಸುವ ಕುರಿತು ಚರ್ಚಿಸಲಾಯಿತು.

ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಸ್. ಮಹಮ್ಮದ್, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಚಂದ್ರ ಆಳ್ವ, ಪುಡಾ ಅಧ್ಯಕ್ಷ ಅಮಲ ರಾಮಚಂದ್ರ ಭಟ್, ಜಿಲ್ಲಾ ರೈತ ಸಂಘದ ಅಧ್ಯಕ್ಷ ರೂಪೇಶ್ ರೈ, ಜಿಲ್ಲಾ ಕಾಂಗ್ರೆಸ್ ಸದಸ್ಯ ರಮಾನಾಥ್ ವಿಟ್ಲ, ಜಿಲ್ಲಾ ಎಸ್ಟಿ ಘಟಕದ ಉಪಾಧ್ಯಕ್ಷ ಕೇಶವ ನಾಯ್ಕ, ಬ್ಲಾಕ್ ಪ್ರಚಾರ ಸಮಿತಿ ಅಧ್ಯಕ್ಷ ಶ್ರೀಧರ್ ಶೆಟ್ಟಿ ಪುಣಚ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

ವಿಟ್ಲ ನಗರ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ಶೆಟ್ಟಿ ಕೊಲ್ಯ, ಪಟ್ಟಣ ಪಂಚಾಯಿತಿ ಸದಸ್ಯರಾದ ವಿಕೆಯಂ ಅಶ್ರಫ್, ವಿ. ಅಬ್ದುಲ್ ರಹಿಮಾನ್ ನೆಲ್ಲಿಗುಡ್ಡೆ, ಬ್ಲಾಕ್ ಕೋಶಾಧಿಕಾರಿ ಸುಧಾಕರ ಪೂಜಾರಿ, ಉಪಾಧ್ಯಕ್ಷರಾದ ಜಯರಾಮ್ ಬಲ್ಲಾಳ್, ಷರೀಫ್ ಬಲ್ನಾಡು ಸೇರಿದಂತೆ ವಿವಿಧ ಘಟಕಗಳ ಪದಾಧಿಕಾರಿಗಳು, ವಲಯ ಅಧ್ಯಕ್ಷರು ಹಾಗೂ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.

ಪಕ್ಷ ಸಂಘಟನೆಯನ್ನು ತಳಮಟ್ಟದಲ್ಲಿ ಮತ್ತಷ್ಟು ಬಲಪಡಿಸಿ ಮುಂಬರುವ ರಾಜಕೀಯ ಸವಾಲುಗಳನ್ನು ಸಮರ್ಥವಾಗಿ ಎದುರಿಸುವ ನಿಟ್ಟಿನಲ್ಲಿ ಸಭೆ ಮಹತ್ವ ಪಡೆದುಕೊಂಡಿತು.

Leave a Reply

Your email address will not be published. Required fields are marked *

error: Content is protected !!