November 10, 2026

ವರದಕ್ಷಿಣೆ ಕಿರುಕುಳ: ಮದುವೆಯಾಗಿ 9 ತಿಂಗಳಲ್ಲೇ ಗೃಹಿಣಿ ಆತ್ಮಹತ್ಯೆ

0
image_editor_output_image-1495469156-1794297430449

ಬೆಂಗಳೂರು: ಮದುವೆಯಾದ ಒಂಬತ್ತೇ ತಿಂಗಳಿಗೆ 23 ವರ್ಷದ ಗೃಹಿಣಿಯೊಬ್ಬರು ಗಂಡನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಣನಕುಂಟೆ ಬಳಿ ನಡೆದಿದೆ.

23 ವರ್ಷದ ಸಿರಿಶಾ ಮೃತ ಗೃಹಿಣಿ. ಜಂಬೂಸವಾರಿ ದಿಣ್ಣೆ ಬಳಿಯ ಅಪಾರ್ಟ್‌ಮೆಂಟ್‌ನಲ್ಲಿ ಇಂದು ಮುಂಜಾನೆ 6 ಗಂಟೆ ಸುಮಾರಿಗೆ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗಂಡ ಪ್ರಶಾಂತ್ ಮತ್ತು ಅತ್ತೆ ರುಕ್ಮಿಣಿ ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದರು. ಮಾನಸಿಕವಾಗಿಯೂ ಹಿಂಸೆ ನೀಡಿದ್ದಾರೆ. ಅದೇ ಕಾರಣಕ್ಕೆ ಸಿರಿಶಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!