November 10, 2026

ಅಗ್ನಿ ಅವಘಡ: ಮೂರು ಅಂಗಡಿಗಳು ಸಂಪೂರ್ಣ ಭಸ್ಮ

0
image_editor_output_image-1497316198-1794297568200

ಮಂಡ್ಯ: ದೀಪಾವಳಿ ಹಬ್ಬದ ಸಂಭ್ರಮದ ನಡುವೆಯೇ ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಚಿನಕುರಳಿ ಗ್ರಾಮದಲ್ಲಿ ಅಗ್ನಿ ಅವಘಡವೊಂದು ಸಂಭವಿಸಿದ್ದು, ಮೂರು ಅಂಗಡಿಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ. ಘಟನೆಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ.

ಚಿನಕುರಳಿ ಗ್ರಾಮದ ಮಹದೇವ್ ಎಂಬುವವರಿಗೆ ಸೇರಿದ ವಾಣಿಜ್ಯ ಕಟ್ಟಡದಲ್ಲಿ ಈ ದುರ್ಘಟನೆ ನಡೆದಿದೆ. ಕಟ್ಟಡದಲ್ಲಿದ್ದ ರವಿ ಎಂಬುವವರಿಗೆ ಸೇರಿದ ಪಾತ್ರೆ ಅಂಗಡಿಯಲ್ಲಿ ದೀಪಾವಳಿ ಹಬ್ಬದ ಹಿನ್ನೆಲೆ ನಿನ್ನೆಯಷ್ಟೇ ವಿಶೇಷ ಪೂಜೆ ಸಲ್ಲಿಸಲಾಗಿತ್ತು. ಇಂದು ಮುಂಜಾನೆ ಇದ್ದಕ್ಕಿದ್ದಂತೆ ರವಿ ಅವರ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ನೋಡನೋಡುತ್ತಿದ್ದಂತೆಯೇ ಬೆಂಕಿಯ ಕೆನ್ನಾಲಿಗೆ ಅಕ್ಕಪಕ್ಕದ ಅಂಗಡಿಗಳಿಗೂ ವ್ಯಾಪಿಸಿದೆ. ಪರಿಣಾಮ ಪಕ್ಕದಲ್ಲೇ ಇದ್ದ ಮೆಡಿಕಲ್ ಸ್ಟೋರ್ ಹಾಗೂ ಪ್ರಾವಿಷನ್ ಸ್ಟೋರ್‌ಗೂ ಬೆಂಕಿ ತಗುಲಿದೆ. ಮೂರು ಅಂಗಡಿಗಳಲ್ಲಿದ್ದ ಪಾತ್ರೆಗಳು, ಔಷಧಿಗಳು ಮತ್ತು ದಿನಸಿ ಸಾಮಗ್ರಿಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದ್ದು, ಅಂಗಡಿ ಮಾಲೀಕರಿಗೆ ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ.

Leave a Reply

Your email address will not be published. Required fields are marked *

error: Content is protected !!