November 11, 2026

ಕಲ್ಲಡ್ಕ: ರಸ್ತೆ ದಾಟುತ್ತಿದ್ದಾಗ ಪಿಕಪ್ ವಾಹನ ಢಿಕ್ಕಿ: ಬರಿಮಾರು ನಿವಾಸಿ ಮೃತ್ಯು

0
image_editor_output_image687738778-1794374104655

ಬಂಟ್ವಾಳ: ರಸ್ತೆ ದಾಟುತ್ತಿದ್ದ ದಿವ್ಯಾಂಗ ಪಾದಚಾರಿಯೊಬ್ಬರಿಗೆ ಪಿಕಪ್ ವಾಹನವೊಂದು ಡಿಕ್ಕಿಹೊಡೆದು ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ನಡೆದಿದ್ದು, ಗಂಭೀರ ಗಾಯಗೊಂಡಿರುವ ವ್ಯಕ್ತಿ ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಮೃತಪಟ್ಟಿದ್ದಾರೆ.

ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಗಾಣದಪಾಲು ನಿವಾಸಿ, ಕೂಲಿ ಕಾರ್ಮಿಕ ಪುರುಷೋತ್ತಮ ಪೂಜಾರಿ (38 ವ.) ಮೃತ ದುರ್ದೈವಿ. ಪುರುಷೋತ್ತಮ ಪೂಜಾರಿಯವರು ಸೂರಿಕುಮೇರ್ ನಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಪಿಕಪ್ ವಾಹನ ಡಿಕ್ಕಿಹೊಡೆದಿದೆ.

ಘಟನೆಯಿಂದ ಗಂಭೀರ ಗಾಯಗೊಂಡಿದ್ದ ಪುರುಷೋತ್ತಮ ಪೂಜಾರಿವರನ್ನು ಸ್ಥಳೀಯರು ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಿದ್ದರಾದರೂ ಆ ವೇಳೆಗಾಗಲೇ ಅವರು ಮೃತಪಟ್ಟಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ತೆರಳಿರುವ ವಿಟ್ಲ ಠಾಣಾ ಪೊಲೀಸರು ಮಾಹಿತಿ ಸಂಗ್ರಹಿಸಿದ್ದಾರೆ. ಅಪಘಾತ ನಡೆಸಿ ಪರಾರಿಯಾಗಿದ್ದ ಪಿಕಪ್ ವಾಹನವನ್ನು ಪೊಲೀಸರು ವಶಕ್ಕೆ ಪಡೆದಿರವುದಾಗಿ ಮಾಹಿತಿ ಲಭಿಸಿದೆ.

Leave a Reply

Your email address will not be published. Required fields are marked *

error: Content is protected !!