November 11, 2026

ಪುತ್ತೂರು: ಕಾರು ಢಿಕ್ಕಿ ಹೊಡೆದ ಪರಿಣಾಮ ಬೆಂಕಿಗೆ ಆಹುತಿಯಾದ ಬೈಕ್

0
image_editor_output_image-1257360635-1794374316651

ಪುತ್ತೂರು: ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಬೆಂಕಿಗೆ ಆಹುತಿಯಾಗಿ ತೀವ್ರವಾಗಿ ಹಾನಿಯಾದ ಘಟನೆ ಉಪ್ಪಿನಂಗಡಿ ಬಳಿಯ ಕೂಟೇಲು ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಮಂಗಳವಾರ ನಡೆದಿದೆ.

ಉಪ್ಪಿನಂಗಡಿಯಿಂದ ಬರುತ್ತಿದ್ದ ಬೈಕ್ ಸವಾರ ಏಕಮುಖ ದ್ವಿಮುಖ ಮಾರ್ಗದಲ್ಲಿ ಹಠಾತ್ತನೆ ಪಥ ಬದಲಾಯಿಸಿದಾಗ ಈ ಘಟನೆ ಸಂಭವಿಸಿದೆ. ಹಿಂದಿನಿಂದ ಬರುತ್ತಿದ್ದ ಕಾರು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ಪರಿಣಾಮ ಬೈಕ್ ರಸ್ತೆಗೆ ಉರುಳಿ ಬಿದ್ದಿದ್ದು, ತಕ್ಷಣವೇ ಬೆಂಕಿ ಹೊತ್ತಿಕೊಂಡಿದೆ.

ಬೆಂಕಿಯನ್ನು ನಂದಿಸಲು ತಕ್ಷಣದ ಯಾವುದೇ ವ್ಯವಸ್ಥೆ ಲಭ್ಯವಿಲ್ಲದ ಕಾರಣ, ಬೈಕ್‌ ಬಹುತೇಕ ಸುಟ್ಟು ಹೋಗಿತ್ತು. ಅದೃಷ್ಟವಶಾತ್, ಬೈಕ್ ಸವಾರ ಪವಾಡ ಸದೃಶವಾಗಿ ಪಾರಾಗಿದ್ದು, ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಪಾಯದಿಂದ ಪಾರಾಗಿದ್ದಾನೆ.

Leave a Reply

Your email address will not be published. Required fields are marked *

error: Content is protected !!