November 11, 2026

ಹಿಟ್ ಆಂಡ್ ರನ್: ಬೈಕ್ ನಲ್ಲಿದ್ದ ಇಬ್ಬರು ಸಾವು

0
image_editor_output_image-988931488-1794378377306

ಬೆಂಗಳೂರು: ರಸ್ತೆ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರನ್ನು ಬಲಿ ಪಡೆದ ಕಾರು ಚಾಲಕ, ಸ್ಥಳದಿಂದ ಪರಾರಿಯಾಗಲು ಯತ್ನಿಸಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹೊರವಲಯದಲ್ಲಿ ನಡೆದಿದೆ.

ಅತಿವೇಗವಾಗಿ ಬಂದ ಕಾರು ಹಿಂದಿನಿಂದ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ಬಳಿಕ ಚಾಲಕ ಕಾರಿನೊಂದಿಗೆ ಪರಾರಿಯಾಗಿದ್ದು, ಸಿನಿಮೀಯ ರೀತಿಯಲ್ಲಿ ಬೆನ್ನಟ್ಟಿದ ಪೊಲೀಸರು ಕೊನೆಗೂ ಕಾರು ಸಮೇತ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಿಲೋಮೀಟರ್‌ಗಟ್ಟಲೆ ನಡೆದ ಈ ಚೇಸಿಂಗ್ ದೃಶ್ಯ ಪೊಲೀಸರ ಮೊಬೈಲ್‌ನಲ್ಲಿ ಸೆರೆಯಾಗಿದೆ.

ದೇವನಹಳ್ಳಿ ತಾಲೂಕಿನ ಅತ್ತಿಬೆಲೆ ಸಮೀಪ ರಾತ್ರಿ ಈ ಭೀಕರ ಅಪಘಾತ ಸಂಭವಿಸಿದೆ. ದೇವನಹಳ್ಳಿ ಪಟ್ಟಣದ ಮಿಥುನ್ ಮತ್ತು ಕನಕ ಮೃತ ದುರ್ದೈವಿಗಳು. ಇಬ್ಬರೂ ಹೆದ್ದಾರಿಯಲ್ಲಿರುವ ಡಾಬಾಗಳಿಗೆ ಮೊಟ್ಟೆ ಮತ್ತು ಚಿಕನ್ ಪೂರೈಕೆ ಮಾಡುವ ಕೆಲಸ ಮಾಡುತ್ತಿದ್ದರು. ರಾತ್ರಿ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಹಿಂದಿನಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್‌ನಲ್ಲಿದ್ದ ಇಬ್ಬರೂ ರಸ್ತೆಗೆ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Leave a Reply

Your email address will not be published. Required fields are marked *

error: Content is protected !!