November 11, 2026

ಉಡುಪಿ: ರಸ್ತೆಯಲ್ಲಿ ಪಟಾಕಿ ಸಿಡಿಸಿ ವಾಹನ ಸವಾರರಿಗೆ ತೊಂದರೆ: 20 ಮಂದಿಯ ವಿರುದ್ಧ FIR ದಾಖಲು

0
image_editor_output_image1276211680-1794378879477

ಉಡುಪಿ: ಮಣಿಪಾಲದಲ್ಲಿ ಸಾರ್ವಜನಿಕ ರಸ್ತೆಯಲ್ಲಿ ಪಟಾಕಿ ಸಿಡಿಸಿ, ಸಾರ್ವಜನಿಕರು ಹಾಗೂ ವಾಹನ ಸವಾರರ ಮೇಲೆ ಪಟಾಕಿ ಎಸೆದು ಉಪದ್ರವ ಸೃಷ್ಟಿಸಿದ ಘಟನೆಗೆ ಸಂಬಂಧಿಸಿ 20 ಮಂದಿಯ ವಿರುದ್ಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಣಿಪಾಲ ಪೊಲೀಸ್ ಠಾಣೆಯ ಉಪನಿರೀಕ್ಷಕ ಶಂಭುಲಿಂಗಯ್ಯ ಎಂ.ಈ. ಅವರು ದೂರು ನೀಡಿದ್ದು, ಆರ್ಯನ್ ಕುಮಾರ್, ಆದಿತ್ಯ ಪ್ರಜಾಪತಿ, ಪ್ರಿಯಾಂಶ್, ಸಿದ್ದಾಂತ್ ಸಿಂಗ್, ಪ್ರಿಯಜಿತ್ ಸಿಂಗ್ ಸೇರಿದಂತೆ ಇತರರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ನವೆಂಬರ್ 8ರಂದು ರಾತ್ರಿ 11 ಗಂಟೆಯ ಸುಮಾರಿಗೆ ಶಿವಳ್ಳಿ ಗ್ರಾಮದ ಮಾಂಡವಿ ಎಮರಾಲ್ಡ್ ಅಪಾರ್ಟ್ಮೆಂಟ್ ಎದುರಿನ ಸಾರ್ವಜನಿಕ ರಸ್ತೆಯಲ್ಲಿ 15ರಿಂದ 20 ಮಂದಿ ಗುಂಪುಗೂಡಿ ಪಟಾಕಿ ಸಿಡಿಸುತ್ತಿದ್ದರು ಎನ್ನಲಾಗಿದೆ. ಈ ವೇಳೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಸಾರ್ವಜನಿಕರು, ವಾಹನ ಸವಾರರು ಹಾಗೂ ವಾಹನಗಳ ಮೇಲೆ ಪಟಾಕಿಗಳನ್ನು ಎಸೆದು ತೊಂದರೆ ಉಂಟುಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಮಾಹಿತಿ ಪಡೆದ ಮಣಿಪಾಲ ಪೊಲೀಸರು ಸ್ಥಳಕ್ಕೆ ಧಾವಿಸಿದಾಗ, ಗುಂಪಿನಲ್ಲಿದ್ದವರು ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆಯೂ ಪಟಾಕಿ ಎಸೆದು ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಈ ಘಟನೆಯಿಂದ ಅನಿಲ್, ಕೀರ್ತಿ, ಡೆನಿಸ್ ರವಿಶೆಟ್ಟಿ ಹಾಗೂ ಜ್ಞಾನೇಶ್ವರ್ ಎಂಬವರು ತೊಂದರೆಗೊಳಗಾಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!