November 13, 2026

ಬಂಟ್ವಾಳ: ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿ ಮೃತ್ಯು

0
image_editor_output_image-1015876156-1794539917874

ಬಂಟ್ವಾಳ: ಪಾಣೆಮಂಗಳೂರು-ಮೆಲ್ಕಾರ್‌ನ ‘ಸ್ವರಾಜ್ ಸ್ಟುಡಿಯೋ’ ಮಾಲೀಕ ರಾಜರತ್ನ ಅವರ ಪುತ್ರಿ ನೇಹಾ (29) ಅವರು ಅನಾರೋಗ್ಯದಿಂದ ಬುಧವಾರ ರಾತ್ರಿ ನಿಧನರಾಗಿದ್ದಾರೆ.

ಕಳೆದ ಒಂದು ವರ್ಷದಿಂದ ತಲೆಗೆ ಸಂಬಂಧಿಸಿದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ. ನೇಹಾ ಹಾಗೂ ಅವರ ಪತಿ ಪ್ರತೀಕ್ ಅವರು ಉದ್ಯೋಗ ನಿಮಿತ್ತ ಕುವೈತ್‌ನಲ್ಲಿ ನೆಲೆಸಿದ್ದರು. ಮೃತರು ಪತಿ, ತಂದೆ ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!