November 13, 2026

ಚಿಕ್ಕಮಗಳೂರು: ನರ್ಸಿಂಗ್ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

fbe2fc7a-7368-4057-ab80-5e02299f661e

ಚಿಕ್ಕಮಗಳೂರು: ನಗರದ ಹೊರವಲಯದಲ್ಲಿರುವ ಪವಿತ್ರವನದ ನಿರ್ಜನ ಪ್ರದೇಶದಲ್ಲಿ ನರ್ಸಿಂಗ್ ವಿದ್ಯಾರ್ಥಿಯೊಬ್ಬನ ಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ತರುವೆ ಗ್ರಾಮದ ರಕ್ಷಿತ್ (19) ಶವ ಅನುಮಾನಾಸ್ಪದವಾಗಿ ಪತ್ತೆಯಾಗಿದೆ. ಈತ ನಗರದ ಹೌಸಿಂಗ್ ಬೋರ್ಡ್‌ನಲ್ಲಿರುವ ವೃತ್ತಿಪರ ಕಾಲೇಜಿನ ಬಾಲಕರ ನಿಲಯದಲ್ಲಿ ಇದ್ದುಕೊಂಡು ಮೆಡಿಕಲ್ ಕಾಲೇಜಿನಲ್ಲಿ ಸರ್ಸಿಂಗ್ ವ್ಯಾಸಂಗ ಮಾಡುತ್ತಿದ್ದ. ನ.7 ರಂದು ಹಾಸ್ಟೆಲ್‌ನಿಂದ ನಾಪತ್ತೆಯಾಗಿದ್ದ.

ಚಿಕ್ಕಮಗಳೂರು ನಗರ ಠಾಣೆಯಲ್ಲಿ ಬಾಲಕನ ನಾಪತ್ತೆ ಪ್ರಕರಣ ಕೂಡ ದಾಖಲಾಗಿತ್ತು. ಆದರೆ, ಇಂದು ಚಿಕ್ಕಮಗಳೂರು ನಗರದ ಹೊರವಲಯ ಜಿಲ್ಲಾ ಪಂಚಾಯಿತಿ ಸಮೀಪದ ಪವಿತ್ರವನದ ನಿರ್ಜನ ಪ್ರದೇಶದಲ್ಲಿ ಆತ್ಮಹತ್ಯೆ ಮಾಡಿಕೊಂಡ ರೀತಿಯಲ್ಲಿ ರಕ್ಷಿತ್ ಮೃತದೇಹ ಪತ್ತೆಯಾಗಿದೆ. ದೇಹದ ಬಣ್ಣ ಹಾಗೂ ಆಕಾರ ನೋಡಿದರೆ ವಾರದ ಹಿಂದೆಯೇ ಆತ್ಮಹತ್ಯೆಗೆ ಶರಣಾಗಿರೋದಾಗಿ ಮೇಲ್ನೋಟಕ್ಕೆ ಕಂಡುಬರುತ್ತಿದೆ.

error: Content is protected !!