ಬೆಳ್ಮಣ್‌ನಲ್ಲಿ ಟಿಪ್ಪರ್‌ಗೆ ಬೈಕ್ ಢಿಕ್ಕಿ; ಯುವಕ ಸಾವು
ಕಾರ್ಕಳ: ಟಿಪ್ಪರ್‌ಗೆ ಬೈಕ್ ಡಿಕ್ಕಿಯಾದ ಪರಿಣಾಮ 19 ವರ್ಷದ ಯುವಕನೋರ್ವ ಸಾವನ್ನಪ್ಪಿದ ಘಟನೆ ಬೆಳ್ಮಣ್‌ನಲ್ಲಿ ಶನಿವಾರ ಸಂಭವಿಸಿದೆ.
ಮೃತರನ್ನು ಪಿಲಾರು ಗ್ರಾಮದ ಕುಂಜಿಗುಡ್ಡೆ ನಿವಾಸಿ ತ್ರಿಶಾಂತ್ ಅಲಿಯಾಸ್ ಪುನೀತ್ ಎಂದು ಗುರುತಿಸಲಾಗಿದೆ. ಮೂಲಗಳ ಪ್ರಕಾರ, ಪುನೀತ್ ಬೆಳ್ಮಣ್‌ನಿಂದ ಪಿಲಾರು ಕಡೆಗೆ ಅತಿ ವೇಗವಾಗಿ ಬೈಕ್ ಚಲಾಯಿಸಿಕೊಂಡು ಹೋಗುತ್ತಿದ್ದರು. ಈ ವೇಳೆ ಬೆಳ್ಮಣ್ ಸೊಸೈಟಿ ಮುಂಭಾಗದಲ್ಲಿ ತಿರುವು ತೆಗೆದುಕೊಳ್ಳಲು ರಸ್ತೆ ಬದಿಯಲ್ಲಿ ನಿಂತಿದ್ದ ಟಿಪ್ಪರ್ ಲಾರಿಯ ಮುಂಭಾಗಕ್ಕೆ ಬೈಕ್ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಪುನೀತ್ ಬೈಕ್‌ನಿಂದ ಎಸೆಯಲ್ಪಟ್ಟಿದ್ದು, ಅವರ ತಲೆ ಟಿಪ್ಪರ್‌ನ ಮುಂಭಾಗಕ್ಕೆ ಬಡಿದ ಪರಿಣಾಮ ಗಂಭೀರ ಗಾಯಗಳಾಗಿವೆ. ತಕ್ಷಣ ಸ್ಥಳೀಯರು ಅವರನ್ನು ಆಸ್ಪತ್ರೆಗೆ ಸಾಗಿಸಿದರಾದರೂ, ದಾರಿಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ.
ಪ್ರತಿಭಾವಂತ ಯುವಕನಾಗಿದ್ದ ಪುನೀತ್, ಸ್ಥಳೀಯವಾಗಿ ಡಿಜೆ ಆಗಿ ಚಿರಪರಿಚಿತನಾಗಿದ್ದನು.
ಈ ಕುರಿತು ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




