November 16, 2026

ಬಂಟ್ವಾಳ: ಕೆಟ್ಟು ನಿಂತಿದ್ದ ಲಾರಿಗೆ ಬೈಕ್ ಢಿಕ್ಕಿ: 9ನೇ ತರಗತಿ ವಿದ್ಯಾರ್ಥಿ ಮೃತ್ಯು

0
image_editor_output_image-881683559-1794806474004

ಬಂಟ್ವಾಳ: ಕೆಟ್ಟು ನಿಂತಿದ್ದ ಲಾರಿಗೆ ಬೈಕ್ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ 9ನೇ ತರಗತಿ ವಿದ್ಯಾರ್ಥಿಯೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನ.15ರಂದು ನಡೆದಿದೆ.

ಅಮ್ಮಾಡಿ ದೇವಿನಗರ ನಿವಾಸಿ ಸುಚಿನ್ ಎಸ್. (14) ಮೃತಪಟ್ಟ ವಿದ್ಯಾರ್ಥಿ. ನ.14ರ ರಾತ್ರಿ ಸುಮಾರು 9 ಗಂಟೆಗೆ ಸುಚಿನ್ ಬೈಕಿನಲ್ಲಿ ಬೆಂಜನಪದವು ಕಡೆಯಿಂದ ಪೊಳಲಿ ಕಡೆಗೆ ತೆರಳುತ್ತಿದ್ದಾಗ ಕಲ್ಪನೆ ಸಮೀಪ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಬೈಕ್ ಢಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಗಂಭೀರ ಗಾಯಗೊಂಡಿದ್ದ ಸುಚಿನ್‌ ಅವರನ್ನು ತಕ್ಷಣ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ನ.15ರಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.

ಮೃತ ಸುಚಿನ್ ಬಡಕಬೈಲ್‌ನ ಡೊಮಿನಿಕ್ ವಿದ್ಯಾಸಂಸ್ಥೆಯಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು. ಈ ಬಗ್ಗೆ ಬಂಟ್ವಾಳ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!