ಮಂಗಳೂರು ವಿಮಾನ ನಿಲ್ದಾಣದಲ್ಲೂ ತಪ್ಪಿದ ಭಾರೀ ಅನಾಹುತ: 236 ಮಂದಿ ಪ್ರಯಾಣಿಕರು ಪಾರು
ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾರೀ ಅನಾಹುತ ತಪ್ಪಿದೆ. ಪೈಲಟ್ನ ಸಮಯ ಪ್ರಜ್ಞೆಯಿಂದ ವಿಮಾನದಲ್ಲಿ 236 ಪ್ರಯಾಣಿಕರು ಬಚಾವ್ ಆಗಿದ್ದಾರೆ.
ವಿಮಾನ ಟೇಕ್ ಆಫ್ ಸಂದರ್ಭದಲ್ಲಿ ಇಂಜಿನ್ನಲ್ಲಿ ದೋಷ ಕಾಣಿಸಿಕೊಂಡಿದೆ. ತಕ್ಷಣವೇ ಎಚ್ಚೆತ್ತ ವಿಮಾನದ ಪೈಲಟ್, ಟೇಕ್ ಆಫ್ ಆಗುವ ಕೊನೆ ಕ್ಷಣದಲ್ಲಿ ಬ್ರೇಕ್ ಹಾಕಿದ್ದು, ಕೂದಲೆಳೆಯ ಅಂತರದಲ್ಲಿ ದೊಡ್ಡ ದುರಂತವೊಂದು ತಪ್ಪಿ ಹೋಗಿದೆ.
ಇಂದು ಸಂಜೆ ಮಂಗಳೂರಿನ ಏರ್ಪೋರ್ಟ್ನಿಂದ ಇಂಡಿಗೋ ವಿಮಾನ ಮಂಗಳೂರಿನಿಂದ ಬೆಂಗಳೂರಿಗೆ ತೆರಳಬೇಕಿತ್ತು. ವಿಮಾನದಲ್ಲಿ ಸುಮಾರು 229 ಪ್ರಯಾಣಿಕರು ಹಾಗೂ 7 ಮಂದಿ ವಿಮಾನದ ಸಿಬ್ಬಂದಿ ಇದ್ದರು. ಸಂಜೆ 6:05ಕ್ಕೆ ಟೇಕ್ ಆಫ್ ಆಗಬೇಕಿತ್ತು. ಆದ್ರೆ, ರನ್ ವೇಯಲ್ಲಿ ಟೇಕ್ ಆಫ್ ಆಗುವ ಸಂದರ್ಭ ವಿಮಾನದ ಇಂಜಿನ್ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ತಕ್ಷಣವೇ ಎಚ್ಚೆತ್ತ ಪೈಲಟ್, ವಿಮಾನ ನಿಲ್ಲಿಸಿದ್ದಾರೆ. ಬಳಿಕ ಪ್ರಯಾಣಿಕರನ್ನು ವಿಮಾನದಿಂದ ಸುರಕ್ಷಿತವಾಗಿ ಕೆಳಗಿಳಿಸಿ ಇಂಡಿಗೋ ಸಂಸ್ಥೆ ಬೇರೆ ವಿಮಾನದ ವ್ಯವಸ್ಥೆ ಮಾಡಿದೆ ಎಂಬ ಮಾಹಿತಿ ಸಿಕ್ಕಿದೆ.




