ಉದ್ಯಮಿ ದಿವಾಕರ ದಾಸ್ ನೇರ್ಲಾಜೆರವರಿಂದಪ್ರಧಾನಿ ನರೇಂದ್ರ ಮೋದಿ ಭೇಟಿ
ಬೆಂಗಳೂರು : ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿರವನ್ನು ಮೈಸೂರಿನ ಎಸ್.ಎಲ್.ವಿ. ಬುಕ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ನ ಆಡಳಿತ ನಿರ್ದೇಶಕರಾದ ದಿವಾಕರ ದಾಸ್ ನೇರ್ಲಾಜೆರವರು ಭೇಟಿಯಾದರು.
ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದ ನೇರ್ಲಾಜೆ ನಿವಾಸಿ ದಿವಾಕರ್ ದಾಸ್ ನೇರ್ಲಾಜೆಯವರು ಮೈಸೂರಿನಲ್ಲಿ ಎಸ್.ಎಲ್.ವಿ. ಬುಕ್ಸ್ ಇಂಡಿಯಾ ಎಂಬ ಬಹುದೊಡ್ಡ ಸಂಸ್ಥೆಯನ್ನು ಕಟ್ಟಿ, ಆ ಮೂಲಕ ಸಾವಿರಾರು ಮಂದಿಗೆ ಉದ್ಯೋಗದಾತರಾಗಿದ್ದಾರೆ.
ಕೊರೋನದ ಸಂಕಷ್ಟದ ಪರಿಸ್ಥಿತಿಯಲ್ಲಿಯೂ ತನ್ನ ಸಿಬ್ಬಂದಿಗಳಿಗೆ ಕೆಲಸವಿಲ್ಲದಿದ್ದರೂ ನಿರಂತರವಾಗಿ ಸಂಬಳನೀಡುತ್ತಾ ಬಂದಿದ್ದರು. ಮಾತ್ರವಲ್ಲದೆ ಪುತ್ತೂರು, ಬಂಟ್ವಾಳ ತಾಲೂಕಿನ ಹಲಾವಾರು ಜನರಿಗೆ ಆಹಾರದ ಕಿಟ್ ನೀಡಿ ಸಹಕರಿಸಿದ್ದರು. ಸಾಮಾಜಿಕ ವಾಗಿಯೂ ತನ್ನನ್ನು ತಾನು ತೊಡಗಿಸಿಕೊಂಡಿರುವ ದಿವಾಕರ ದಾಸ್ ನೇರ್ಲಾಜೆರವರು ಹಲವಾರು ಬಡವರಿಗೆ, ಅನಾರೋಗ್ಯ ಪೀಡಿತರಿಗೆ ಸಹಾಯ, ಬಡ ವಿದ್ಯಾರ್ಥಿಗಳ ವಿದ್ಯಾರ್ಜನೆಗೆ ಸಹಾಯ, ಹಲವಾರು ಸರಕಾರಿ ಶಾಲೆಗಳಿಗೆ ಉಚಿತ ಪುಸ್ತಕ ವಿತರಣೆ ಮಾಡುತ್ತಾ ಬಂದಿದ್ದಾರೆ.
ಇಷ್ಟು ಮಾತ್ರವಲ್ಲದೆ ಧಾರ್ಮಿಕವಾಗಿಯೂ ತನ್ನನ್ನು ತಾನು ತೊಡಗಿಸಿಕೊಂಡಿರುವ ಅವರು ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನ, ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ, ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ, ಕಲ್ಲೆಗ ಶ್ರೀ ಕಲ್ಕುಡ ಕಲ್ಲುರ್ಟಿ ದೈವಸ್ಥಾನ, ಸಂಪ್ಯ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಸೇರಿದಂತೆ ಹಲವಾರು ದೇವಸ್ಥಾನಗಳಿಗೆ ಪ್ರತಿವರ್ಷ ಜಾತ್ರೋತ್ಸವದ ಸಂದರ್ಭದಲ್ಲಿ ವಿಶೇಷ ಹೂವಿನ ಅಲಂಕಾರವನ್ನು ಮಾಡಿಸುತ್ತಾ ಬರುತ್ತಿದ್ದಾರೆ.




