November 17, 2026

ವಿಟ್ಲದಲ್ಲಿ ನ. 19ರಂದು ನೂತನ ಇಂದಿರಾ ಕ್ಯಾಂಟೀನ್ ಉದ್ಘಾಟನೆ: ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಂದ ಚಾಲನೆ

0
image_editor_output_image-529260043-1794925747273

ವಿಟ್ಲ: ಬಡವರು, ಕಾರ್ಮಿಕರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಕಡಿಮೆ ದರದಲ್ಲಿ ಆಹಾರ ಒದಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಇಂದಿರಾ ಕ್ಯಾಂಟೀನ್ ವಿಟ್ಲದಲ್ಲಿ ಆರಂಭಗೊಳ್ಳಲಿದೆ.

ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ನಗರಾಭಿವೃದ್ಧಿ ಕೋಶ, ಮಂಗಳೂರು ಇವರ ಆಶ್ರಯದಲ್ಲಿ ನೂತನ ಇಂದಿರಾ ಕ್ಯಾಂಟೀನ್‌ನ ಉದ್ಘಾಟನಾ ಸಮಾರಂಭವು ನವೆಂಬರ್ 19ರ ಗುರುವಾರ ಬೆಳಿಗ್ಗೆ 10 ಗಂಟೆಗೆ ವಿಟ್ಲ ನಾಡ ಕಚೇರಿ ಬಳಿ ನಡೆಯಲಿದೆ.

ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಉದ್ಘಾಟಿಸಲಿದ್ದಾರೆ.  ರಾಜ್ಯ ಸರ್ಕಾರದ ಸಚಿವರು, ಜಿಲ್ಲೆಯ ಜನಪ್ರತಿನಿಧಿಗಳು, ಶಾಸಕರು ಅಧಿಕಾರಿಗಳು ಹಾಗೂ ವಿವಿಧ ಕ್ಷೇತ್ರಗಳ ಗಣ್ಯರು ಭಾಗವಹಿಸಲಿದ್ದಾರೆ ಎಂದು ಆಮಂತ್ರಣ ಪತ್ರಿಕೆಯಲ್ಲಿ ತಿಳಿಸಲಾಗಿದೆ.

ಇಂದಿರಾ ಕ್ಯಾಂಟೀನ್ ಆರಂಭದಿಂದ ವಿಟ್ಲ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಬಡವರು, ಕೂಲಿ ಕಾರ್ಮಿಕರು, ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ಕಡಿಮೆ ದರದಲ್ಲಿ ಉಪಾಹಾರ ಹಾಗೂ ಊಟದ ಸೌಲಭ್ಯ ದೊರೆಯಲಿದೆ. ಇದರಿಂದ ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗುವ ನಿರೀಕ್ಷೆಯಿದೆ.

ಮಂಗಳೂರು ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ಇಂದಿರಾ ಕ್ಯಾಂಟೀನ್‌ಗಳ ಸ್ಥಾಪನೆಗೆ ಸರ್ಕಾರ ಕ್ರಮ ಕೈಗೊಂಡಿರುವ ಹಿನ್ನೆಲೆಯಲ್ಲಿ ವಿಟ್ಲದಲ್ಲಿಯೂ ಈ ಸೌಲಭ್ಯ ಆರಂಭವಾಗುತ್ತಿರುವುದು ಸಾರ್ವಜನಿಕರಲ್ಲಿ ಸಂತಸ ಮೂಡಿಸಿದೆ.

Leave a Reply

Your email address will not be published. Required fields are marked *

error: Content is protected !!