November 18, 2026

ರಾಜ್ಯ ಪೊಲೀಸ್ ಇಲಾಖೆಯ 32 ಐಪಿಎಸ್ ಅಧಿಕಾರಿಗಳ ವರ್ಗಾವಣೆ: ಮಂಗಳೂರಿನ ಪಶ್ಚಿಮ ವಲಯದ ಐಜಿಪಿಯಾಗಿ ಎನ್.ಶಶಿಕುಮಾರ್

0
if-J4tfz_400x400

ಬೆಂಗಳೂರು: ರಾಜ್ಯ ಸರಕಾರವು ಆರ್.ಹಿತೇಂದ್ರ, ಸೀಮಂತ್ ಕುಮಾರ್ ಸಿಂಗ್, ಹೇಮಂತ್ ಎಂ.ನಿಂಬಾಳ್ಕರ್ ಸೇರಿ 32 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಬುಧವಾರ ಆದೇಶ ಹೊರಡಿಸಿದೆ.

ಎಡಿಜಿಪಿ ಮತ್ತು ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಸೀಮಂತ್ ಕುಮಾರ್ ಸಿಂಗ್ ಅವರನ್ನು ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಎಡಿಜಿಪಿ ಹುದ್ದೆಗೆ, ಸಿಐಡಿಯ ಎಡಿಜಿಪಿ ಬಿಜಯ್ ಕುಮಾರ್ ಸಿಂಗ್ ಅವರನ್ನು ಕಾನೂನು ಮತ್ತು ಸುವ್ಯವಸ್ಥೆಯ ಎಡಿಜಿಪಿ ಹುದ್ದೆಗೆ, ಸಂವಹನ, ಲಾಜಿಸ್ಟಿಕ್ಸ್ ಮತ್ತು ಆಧುನೀಕರಣ ವಿಭಾಗದ ಎಡಿಜಿಪಿಯಾಗಿದ್ದ ಎಸ್. ಮುರುಗನ್ ಅವರನ್ನು ಲೋಕಾಯುಕ್ತ ಎಡಿಜಿಪಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

ಸ್ಥಳ ನಿರೀಕ್ಷೆಯಲ್ಲಿದ್ದ ಹೇಮಂತ್ ಎಂ. ನಿಂಬಾಳ್ಕರ್ ಅವರಿಗೆ ಬೆಂಗಳೂರು ನಗರ ಸಂಚಾರ ವಿಭಾಗದ ಪೊಲೀಸ್ ಆಯುಕ್ತ ಹುದ್ದೆಗೆ ನಿಯೋಜಿಸಿದ್ದು, ರೌಡಿ ನಿಗ್ರಹ ಪಡೆಯ ಆಯುಕ್ತರನ್ನಾಗಿ ಹೆಚ್ಚುವರಿ ಹೊಣೆ ನೀಡಲಾಗಿದೆ. ಸ್ಥಳ ನಿರೀಕ್ಷೆಯಲ್ಲಿದ್ದ ಎನ್. ಶಶಿಕುಮಾರ್ ಅವರನ್ನು ಪಶ್ಚಿಮ ವಲಯದ ಐಜಿಪಿ ಹುದ್ದೆಗೆ, ಸ್ಥಳ ನಿರೀಕ್ಷೆಯಲ್ಲಿದ್ದ ಅನುಪಮ್ ಅಗರ್ವಾಲ್ ಅವರನ್ನು ಕರ್ನಾಟಕ ರಾಜ್ಯ ಮೀಸಲು ಪೊಲೀಸ್‍ನ(ಕೆಎಸ್‍ಆರ್‍ಪಿ) ಐಜಿಪಿ ಹುದ್ದೆಗೆ ನಿಯೋಜಿಸಲಾಗಿದೆ.

ಲೋಕಾಯುಕ್ತ ಎಡಿಜಿಪಿಯಾಗಿದ್ದ ಮನೀಶ್ ಖರ್ಬೀಕರ್ ಅವರನ್ನು ಸಂವಹನ, ಲಾಜಿಸ್ಟಿಕ್ಸ್ ಮತ್ತು ಆಧುನೀಕರಣದ ಎಡಿಜಿಪಿ ಹುದ್ದೆಗೆ, ಕಲಬುರಗಿ ನಗರದ ಪೊಲೀಸ್ ಆಯುಕ್ತ ಹಾಗೂ ಡಿಐಜಿಪಿಯಾಗಿದ್ದ ಡಾ. ಶರಣಪ್ಪ ಎಸ್.ಡಿ ಅವರನ್ನು ರೈಲ್ವೇಸ್‍ನ ಡಿಐಜಿಪಿ ಹುದ್ದೆಗೆ, ಬೆಂಗಳೂರು ನಗರದ ಜಂಟಿ ಪೊಲೀಸ್ ಆಯುಕ್ತ ಕುಲ್ದಿಪ್ ಕುಮಾರ್ ಆರ್. ಜೈನ್ ಅವರನ್ನು ಕಲಬುರಗಿ ನಗರದ ಡಿಐಜಿಪಿ ಮತ್ತು ಪೊಲೀಸ್ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ.

ಪುಟ್ಟಮಾದಯ್ಯ ಅವರನ್ನು ಮೈಸೂರು ದಕ್ಷಿಣ ವಲಯದ ಡಿಐಜಿಪಿ ಹುದ್ದೆಗೆ, ಜಲಸಂಪನ್ಮೂಲ ಇಲಾಖೆಯ ಜಾಗೃತ ದಳದ ಡಿಐಜಿಪಿಯಾದ ಡಾ. ಎಂ. ಅಶ್ವಿನಿ ಅವರನ್ನು ನೇಮಕಾತಿ ವಿಭಾಗದ ಡಿಐಜಿಪಿ ಹುದ್ದೆಗೆ, ರೈಲ್ವೇಸ್‍ನ ಡಿಐಜಿಪಿಯಾಗಿದ್ದ ಜೆ.ಕೆ. ರಶ್ಮಿ ಅವರನ್ನು ಜಲಸಂಪನ್ಮೂಲ ಇಲಾಖೆಯ ಜಾಗೃತ ದಳದ ಡಿಐಜಿಪಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

ಕಾನೂನು ಮತ್ತು ಸುವ್ಯವಸ್ಥೆಯ ಎಡಿಜಿಪಿಯಾಗಿದ್ದ ಆರ್. ಹಿತೇಂದ್ರ ಅವರನ್ನು ಬೆಂಗಳೂರು ನಗರ ಮುಖ್ಯ ಪೊಲೀಸ್ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ. ಪೊಲೀಸ್ ಕಂಪ್ಯೂಟರ್ ವಿಭಾಗದ ಐಜಿಪಿಯಾಗಿದ್ದ ಲಾಭೂ ರಾಮ್ ಅವರನ್ನು ಸೆಂಟ್ರಲ್ ಬೆಂಗಳೂರು ನಗರದ ಪೊಲೀಸ್ ಆಯುಕ್ತರಾಗಿ, ಬಳ್ಳಾರಿ ವಲಯದ ಐಜಿಪಿಯಾಗಿದ್ದ ಡಾ. ಪಿ.ಎಸ್. ಹರ್ಷ ಅವರನ್ನು ಪೂರ್ವ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ, ಆಂತರಿಕ ಭದ್ರತಾ ವಿಭಾಗದ ಐಜಿಪಿ ವಿಕಾಶ್ ಕುಮಾರ್ ವಿಕಾಶ್ ಅವರನ್ನು ಪಶ್ಚಿಮ ಬೆಂಗಳೂರು ನಗರದ ಪೊಲೀಸ್ ಆಯುಕ್ತರಾಗಿ ನೇಮಕ ಮಾಡಲಾಗಿದೆ.

ಮೈಸೂರು ದಕ್ಷಿಣ ವಲಯದ ಐಜಿಪಿ ಡಾ. ಎಂ.ಬಿ. ಬೋರಲಿಂಗಯ್ಯ ಅವರನ್ನು ಉತ್ತರ ಬೆಂಗಳೂರು ನಗರದ ಪೊಲೀಸ್ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ. ಸಿ. ವಂಶಿಕೃಷ್ಣ ಅವರನ್ನು ಬೆಂಗಳೂರು ನಗರದ ಜಂಟಿ ಪೊಲೀಸ್ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದ್ದು, ದಕ್ಷಿಣ ಬೆಂಗಳೂರು ನಗರದ ಪೊಲೀಸ್ ಆಯುಕ್ತರಾಗಿ ಹೆಚ್ಚುವರಿ ಹೊಣೆಯನ್ನು ನೀಡಲಾಗಿದೆ.

ಡಾ. ಅನೂಪ್ ಎ. ಶೆಟ್ಟಿ ಬೆಂಗಳೂರು ನಗರ ಸಂಚಾರ ಪಶ್ಚಿಮ ವಿಭಾಗದ ಡಿಸಿಪಿ ಅವರನ್ನು ಪೂರ್ವ ಬೆಂಗಳೂರು ನಗರದ ಸಂಚಾರ ವಿಭಾಗದ ಡಿಸಿಪಿ ಹುದ್ದೆಗೆ, ವಿಜಯಪುರದ ಪೊಲೀಸ್ ಸೂಪರಿಂಟೆಂಡೆಂಟ್ ಆದ ಲಕ್ಷ್ಮಣ್ ನಿಂಬರಗಿ ಅವರನ್ನು ಸೆಂಟ್ರಲ್ ಬೆಂಗಳೂರು ನಗರದ ಸಿಟಿ ಆಮ್ರ್ಡ್ ರಿಸರ್ವ್‍ನ ಡಿಸಿಪಿ ಹುದ್ದೆಗೆ, ಮೈಸೂರು ಕರ್ನಾಟಕ ಪೊಲೀಸ್ ಅಕಾಡೆಮಿಯ ಉಪನಿರ್ದೇಶಕ ಚನ್ನಬಸವಣ್ಣ ಲಂಗೋಟಿ ಅವರನ್ನು ಸೆಂಟ್ರಲ್ ಬೆಂಗಳೂರಿನ ಇಂದಿರಾನಗರದ ಡಿಸಿಪಿ ಹುದ್ದೆಗೆ ನೇಮಕ ಮಾಡಲಾಗಿದೆ.

ಬೆಂಗಳೂರು ನಗರದ ವಾಯುವ್ಯ ವಿಭಾಗದ ಡಿಸಿಪಿಯಾದ ನಾಗೇಶ್ ಡಿ.ಎಲ್. ಅವರನ್ನು ಉತ್ತರ ಬೆಂಗಳೂರು ನಗರದ ಯಶವಂತಪುರದ ಡಿಸಿಪಿಯಾಗಿ, ಸಿಐಡಿ-2ರ ಪೊಲೀಸ್ ಸೂಪರಿಂಟೆಂಡೆಂಟ್ ಆದ ಲೋಕೇಶ್ ಭರಮಪ್ಪ ಜಗಲಾಸರ್ ಅವರನ್ನು ಸೆಂಟ್ರಲ್ ಬೆಂಗಳೂರಿನ ಸಂಚಾರ ವಿಭಾಗದ ಡಿಸಿಪಿ ಹುದ್ದೆಗೆ, ಬೆಂಗಳೂರು ನಗರದ ಪಶ್ಚಿಮ ವಿಭಾಗದ ಡಿಸಿಪಿ ಯತೀಶ್ ಎನ್. ಅವರನ್ನು ಪಶ್ಚಿಮ ಬೆಂಗಳೂರು ನಗರದ ಕೆಂಗೇರಿ ಡಿಸಿಪಿ ಹುದ್ದೆಗೆ, ವೈಟ್‍ಫೀಲ್ಡ್ ವಿಭಾಗದ ಡಿಸಿಪಿ ಸೈದುಲು ಅಡಾವತ್ ಅವರನ್ನು ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಸೂಪರಿಂಟೆಂಡೆಂಟ್ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!