ವಿಟ್ಲ: ರಸ್ತೆ ದಾಟುತ್ತಿದ್ದ ವೇಳೆ ವಿದ್ಯಾರ್ಥಿನಿಗೆ ಲಾರಿ ಡಿಕ್ಕಿ: ಜನಪ್ರಿಯ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಮೃತ್ಯು
ವಿಟ್ಲ: ರಸ್ತೆ ದಾಟುತ್ತಿದ್ದ ವಿದ್ಯಾರ್ಥಿನಿ ಮೇಲೆ ಲಾರಿ ಹರಿದ ಪರಿಣಾಮ ವಿದ್ಯಾರ್ಥಿನಿ ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ ಸಮೀಪದ ನೇರಳಕಟ್ಟೆ ಎಂಬಲ್ಲಿ ನಡೆದಿದೆ.


ನೇರಳಕಟ್ಟೆ ನಿವಾಸಿ, ಕಂಬಳಬೆಟ್ಟು ಜನಪ್ರಿಯ ಸೆಂಟ್ರಲ್ ಸ್ಕೂಲ್ ನ 9ನೇ ತರಗತಿ ವಿದ್ಯಾರ್ಥಿನಿ ಫಾತಿಮಾ ಇಝಾಹಾ ಇಲ್ಯಾಸ್ ಮೃತಪಟ್ಟ ಬಾಲಕಿ.
ಈಕೆ ಶಾಲೆ ಬಿಟ್ಟು ಬಸ್ಸಿನಿಂದ ಇಳಿದು ರಸ್ತೆ ದಾಟುತ್ತಿದ್ದ ವೇಳೆ ಲಾರಿ ಡಿಕ್ಕಿ ಹೊಡೆದು ಘಟನೆ ಸಂಭವಿಸಿದೆ




