November 20, 2026

ಮಂಗಳೂರು: ರಾಜ್ಯ ಮಟ್ಟದ 73ನೇ ಸಹಕಾರ ಸಪ್ತಾಹದ ಸಮಾರೋಪ: ಒಡಿಯೂರು ಶ್ರೀ ವಿವಿಧೋದ್ಧೇಶ ಸೌಹಾರ್ದ ಸಹಕಾರ ಸಂಘಕ್ಕೆ ಸಹಕಾರ ಮಾಣಿಕ್ಯ ಪ್ರಶಸ್ತಿ

0
image_editor_output_image-1734553772-1795194516678

ಮಂಗಳೂರು: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ಎಸ್‌ಸಿಡಿಸಿಸಿಸಿ ಬ್ಯಾಂಕ್ ಹಾಗೂ ದ.ಕ ಮತ್ತು ಉಡುಪಿ ಜಿಲ್ಲೆಗಳ ಸಹಕಾರ ಸಂಘಗಳ ಸಹಯೋಗದಲ್ಲಿ ಮಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ 73ನೇ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಅವಿಭಜಿತ ದ.ಕ ಮತ್ತು ಉಡುಪಿ ಜಿಲ್ಲೆಯಲ್ಲಿ ಸರ್ವಾಂಗೀಣ ಪ್ರಗತಿ ಸಾಧಿಸಿದ ಅತ್ಯುತ್ತಮ ಸಹಕಾರ ಸಂಘಕ್ಕೆ ನೀಡಲಾಗುವ ಸಹಕಾರ ಮಾಣಿಕ್ಯ ಪ್ರಶಸ್ತಿಯನ್ನು ಒಡಿಯೂರು ಶ್ರೀ ವಿವಿಧೋದ್ಧೇಶ ಸೌಹಾರ್ದ ಸಹಕಾರ ಸಂಘ ಪ್ರದಾನ ಮಾಡಲಾಯಿತು.

ಸಹಕಾರ ಸಂಘದ ನಿರ್ದೇಶಕರಾದ ಲೋಕನಾಥ ಜಿ. ಶೆಟ್ಟಿ ಕೊಡಿಯಾಲ್‌ಬೈಲ್ ಪ್ರಶಸ್ತಿಯನ್ನು ಸ್ವೀಕರಿಸಿದರು. ಸಹಕಾರ ಸಚಿವರಾದ ಲಕ್ಷ್ಮಣ ಸಂಗಪ್ಪ ಸವದಿ, ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ. ಖಾದರ್ ಫರೀದ್ , ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷ ಜಿ.ಟಿ ದೇವೇಗೌಡ, ಎಸ್‌ಸಿಡಿಸಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಡಾ.ಎಂ.ಎನ್. ರಾಜೇಂದ್ರ ಕುಮಾರ್, ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕರಾದ ಡಿ. ವೇದವ್ಯಾಸ ಕಾಮತ್, ಯಶ್‌ಪಾಲ್,
ಭರತ್ ಶೆಟ್ಟಿ ವೈ. ವಿಧಾನಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ, ಕಿಶೋರ್ ಕುಮಾರ್ ಬೊಟ್ಯಾಡಿ, ದ.ಕ.ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ರವಿರಾಜ್ ಹೆಗ್ದೆ, ಪ್ರಮುಖರಾದ ಐವನ್ ಡಿ’ಸೋಜ, ಮೊದಲಾದವರು ಉಪಸ್ಥಿತರಿದ್ದರು.

ಈ ಹಿಂದಿನ ವರ್ಷಗಳಲ್ಲಿ 4 ಬಾರಿ ರಾಜ್ಯ ಮಟ್ಟದ ಹಾಗೂ 1 ಬಾರಿ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯಿಂದ ಉತ್ತಮ ಸೌಹಾರ್ದ ಪ್ರಶಸ್ತಿಯು ಲಭಿಸಿದ್ದು, ಈಗ ಅವಿಭಜಿತ ದ.ಕ. ಮತ್ತು ಉಡುಪಿ ಜಿಲ್ಲೆಯಲ್ಲಿ ರಾಜ್ಯ ಮಟ್ಟದ ಸಹಕಾರಿ ಮಾಣಿಕ್ಯ ಪ್ರಶಸ್ತಿ ಪಡೆದ ಹೆಗ್ಗಳಿಕೆಗೆ ಸಹಕಾರಿಯು ಪಾತ್ರವಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!