ನ.24 ರಂದು ಬಂಟ್ವಾಳದಲ್ಲಿ ಮಾದಕ ವ್ಯಸನ ವಿರುದ್ಧ ಜಾಗೃತಿ ಕಾರ್ಯಕ್ರಮ*
ಬಂಟ್ವಾಳ : ಜಮೀಯ್ಯತುಲ್ ಫಲಾಹ್ ಬಂಟ್ವಾಳ ತಾಲೂಕು ಘಟಕ ಮತ್ತು ಬಂಟ್ವಾಳ ತಾಲೂಕು ಸಂಯುಕ್ತ ಜಮಾಅತ್ ಕಮಿಟಿ (ರಿ) ಇವುಗಳ ಜಂಟಿ ಆಶ್ರಯದಲ್ಲಿ ಮಾದಕ ವ್ಯಸನ ವಿರುದ್ಧ ಜಾಗೃತಿ ಕಾರ್ಯಕ್ರಮ ನ.24 ರಂದು ಅಪರಾಹ್ನ 2.30 ಕ್ಕೆ ಬಳಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಲಿದೆ.
ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ| ಅರುಣ್ ಕೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಚ್. ಆರ್. ತಿಮ್ಮಯ್ಯ ಇವರ ಘನ ಉಪಸ್ಥಿತಿಯಲ್ಲಿ ನಡೆಯುವ ಈ ಜಾಗೃತಿ ಕಾರ್ಯಕ್ರಮದಲ್ಲಿ ಕಕ್ಕಿಂಜೆ ಎಂ.ಜೆ.ಎಂ. ಮುದರ್ರಿಸ್ ಅಬೂಬಕ್ಕರ್ ಸಿದ್ದೀಕ್ ಜಲಾಲಿ ಜಾಗೃತಿ ಉಪನ್ಯಾಸಗೈಯುವರು.
ಸುರಿಬೈಲು ದಾರುಲ್ ಅಶ್ ಅರಿಯಾ ವ್ಯವಸ್ಥಾಪಕ ಮುಹಮ್ಮದ್ ಅಲಿ ಸಖಾಫಿ
ದು:ಹಾ ನೆರವೇರಿಸಲಿದ್ದು, ಬಂಟ್ವಾಳ ತಾಲೂಕು ಸಂಯುಕ್ತ ಜಮಾಅತ್ ಕಮಿಟಿ ಅಧ್ಯಕ್ಷ ಹಾಜಿ ಮುಹಮ್ಮದ್ ಹನೀಫ್ ಗೋಳ್ತಮಜಲು ಉದ್ಘಾಟಿಸುವರು. ಜಮೀಯ್ಯತುಲ್ ಫಲಾಹ್ ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷ ಬಿ.ಎಂ.ಅಬ್ಬಾಸ್ ಅಲಿ ಅಧ್ಯಕ್ಷತೆ ವಹಿಸುವರು. ಬಂಟ್ವಾಳ ತಾಲೂಕು ಸಂಯುಕ್ತ ಜಮಾಅತ್ ಕಮಿಟಿ ಕಾರ್ಯದರ್ಶಿ ನೋಟರಿ ಅಬೂಬಕ್ಕರ್ ವಿಟ್ಲ, ಕೋಶಾಧಿಕಾರಿ , ಪಿ.ಎಸ್ ಅಬ್ದುಲ್ ಹಮೀದ್ ಹಾಜಿ ನೆಹರುನಗರ,ಜಮೀಯ್ಯತುಲ್ ಫಲಾಹ್ ಕಾರ್ಯದರ್ಶಿ ಅಬ್ದುಲ್ ಹಕೀಂ ಕಲಾಯಿ, ಕೋಶಾಧಿಕಾರಿ ಲತೀಫ್ ನೇರಳಕಟ್ಟೆ ಮೊದಲಾದವರು ಭಾಗವಹಿಸಲಿದ್ದಾರೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.




