November 23, 2026

ಚಾಲಕನ ನಿಯಂತ್ರಣ ತಪ್ಪಿದ ರಸ್ತೆಬದಿಯ ಮರಕ್ಕೆ ವ್ಯಾನ್ ಢಿಕ್ಕಿ: 8 ಮಂದಿ ಮೃತ್ಯು, ಇಬ್ಬರು ಗಂಭೀರ

0
image_editor_output_image-1848762647-1795418091450

ತಿರುಚಿರಾಪಳ್ಳಿ (ತಮಿಳುನಾಡು): ಚಾಲಕನ ನಿಯಂತ್ರಣ ತಪ್ಪಿದ ವ್ಯಾನ್ ರಸ್ತೆಬದಿಯ ಮರಕ್ಕೆ ಬಲವಾಗಿ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಂದಿ ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಲ್ಲಿ ನಡೆದಿದೆ.

ನಾಮಕ್ಕಲ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ತಂಜಾವೂರಿಗೆ ವಾಪಸಾಗುತ್ತಿದ್ದಾಗ ಸಂಜೆ ವೇಳೆ ಈ ದುರ್ಘಟನೆ ಸಂಭವಿಸಿದೆ. ವ್ಯಾನ್‌ನಲ್ಲಿ ಒಟ್ಟು 10 ಮಂದಿ ಪ್ರಯಾಣಿಸುತ್ತಿದ್ದರು. ಅಪಘಾತದ ತೀವ್ರತೆಗೆ ಐವರು ಸ್ಥಳದಲ್ಲೇ ಕೊನೆಯುಸಿರೆಳೆದರೆ, ಉಳಿದ ಮೂವರು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಮೃತರಲ್ಲಿ ತಂಜಾವೂರು ಜಿಲ್ಲೆಯ ತಿರುಕ್ಕಟ್ಟುಪಲ್ಲಿ ಸಮೀಪದ ಮಹಾರಾಜಪುರಂ ನಿವಾಸಿ ಎ. ಶಕ್ತಿವೇಲ್ (45) ಸೇರಿದ್ದಾರೆ ಎಂದು ಗುರುತಿಸಲಾಗಿದೆ.

ಘಟನೆಯ ಮಾಹಿತಿ ತಿಳಿದ ತಕ್ಷಣವೇ ಸ್ಥಳೀಯರು ಹಾಗೂ ಪೊಲೀಸರು ರಕ್ಷಣಾ ಕಾರ್ಯಾಚರಣೆ ನಡೆಸಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಮುಖ್ಯಮಂತ್ರಿ ಸಂತಾಪ: ದುರ್ಘಟನೆಗೆ ತೀವ್ರ ಸಂತಾಪ ಸೂಚಿಸಿರುವ ತಮಿಳುನಾಡು ಮುಖ್ಯಮಂತ್ರಿ, ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಅಲ್ಲದೆ, ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಇಬ್ಬರು ಗಾಯಾಳುಗಳಿಗೆ ಅತ್ಯುತ್ತಮ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಿ, ಸೂಕ್ತ ಚಿಕಿತ್ಸೆ ನೀಡುವಂತೆ ಜಿಲ್ಲಾಡಳಿತ ಹಾಗೂ ಆಸ್ಪತ್ರೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!