November 24, 2026

ಕಾಪು: ಬೀಚ್‌ನಲ್ಲಿ ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ

0
image_editor_output_image1678561313-1795490332953

ಕಾಪು: ಭಾನುವಾರ ಸಂಜೆ ಕಾಪು ಬೀಚ್‌ನಲ್ಲಿ ಈಜಲು ಸಮುದ್ರಕ್ಕಿಳಿದು ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹಗಳು ಸೋಮವಾರ ಮಧ್ಯಾಹ್ನ ಪತ್ತೆಯಾಗಿವೆ.

ಮೃತರನ್ನು ಶಿವಮೊಗ್ಗ ಮೂಲದ ಕುಂದಾಪುರದ ಮೂಡ್ಲಕಟ್ಟೆ ಕಾಲೇಜಿನ ವಿದ್ಯಾರ್ಥಿ ಸಮೀರ್ ಮತ್ತು ದಾವಣಗೆರೆ ಜಿಲ್ಲೆಯ ಮಲ್ಲಿಕ್ ರಿಹಾನ್ ಎಂದು ಗುರುತಿಸಲಾಗಿದೆ.

ಸ್ಥಳೀಯ ಪೊಲೀಸರ ನೆರವಿನೊಂದಿಗೆ ಕರಾವಳಿ ಕಾವಲು ಪಡೆ ಸಿಬ್ಬಂದಿ ಮೃತದೇಹಗಳನ್ನು ಸಮುದ್ರದಿಂದ ಹೊರತೆಗೆದು ದಡಕ್ಕೆ ತಂದಿದ್ದಾರೆ.

ಗುರುತು ಪತ್ತೆ ಪ್ರಕ್ರಿಯೆಗಾಗಿ ಕಾಪು ಪೊಲೀಸರು ಹಾಗೂ ಮೃತ ವಿದ್ಯಾರ್ಥಿಗಳ ಪೋಷಕರು ಸ್ಥಳದಲ್ಲಿ ಉಪಸ್ಥಿತರಿದ್ದರು.

ನಾಪತ್ತೆಯಾಗಿದ್ದ ವಿದ್ಯಾರ್ಥಿಗಳಿಗಾಗಿ ಕರಾವಳಿ ಕಾವಲು ಪಡೆ ಸಿಬ್ಬಂದಿ, ಮುಳುಗು ತಜ್ಞ ಈಶ್ವರ್ ಮಲ್ಪೆ ಮತ್ತು ಅವರ ತಂಡ ಹಾಗೂ ಸ್ಥಳೀಯ ನಿವಾಸಿಗಳ ಸಹಯೋಗದೊಂದಿಗೆ ತೀವ್ರ ಶೋಧ ಕಾರ್ಯಾಚರಣೆ ನಡೆಸಲಾಗಿತ್ತು.

Leave a Reply

Your email address will not be published. Required fields are marked *

error: Content is protected !!