ಉಡುಪಿ: ಭೀಕರ ರಸ್ತೆ ಅಪಘಾತ: ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
ಉಡುಪಿ: ಬೈಂದೂರು ತಾಲೂಕಿನ ಶಿರೂರಿನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿದ್ದಾರೆ.
ಮೃತರನ್ನು ಉಪ್ಪುಂದ ಜನತಾ ಕಾಲೊನಿಯ ಅಭಿಷೇಕ ಖಾರ್ವಿ (23) ಹಾಗೂ ಪ್ರವೀಣ ಖಾರ್ವಿ (23) ಎಂದು ಗುರುತಿಸಲಾಗಿದೆ.
ಉಪ್ಪುಂದದ ಪ್ರಸಿದ್ಧ ಕೊಡಿ ಹಬ್ಬದ ಹಿನ್ನೆಲೆಯಲ್ಲಿ ಊರಿಗೆ ಆಗಮಿಸಿದ್ದ ಇಬ್ಬರು ಯುವಕರು ಅಪಘಾತದಲ್ಲಿ ಬಲಿಯಾಗಿರುವುದು ಕುಟುಂಬಸ್ಥರಲ್ಲಿ ಶೋಕದ ಛಾಯೆ ಮೂಡಿಸಿದೆ. ಪ್ರವೀಣ ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದರೆ, ಅಭಿಷೇಕ ಮೀನುಗಾರಿಕೆ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದರು. ಇಬ್ಬರೂ ಬಡ ಕುಟುಂಬದವರಾಗಿದ್ದು, ಯುವಕರ ಅಕಾಲಿಕ ಸಾವು ಕುಟುಂಬಕ್ಕೆ ಆಧಾರವನ್ನೇ ಕಳೆದುಕೊಂಡಂತಾಗಿದೆ.




